KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು (Bhadravati Taluk) ವಿಐಎಸ್ಎಲ್ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮರಿ ಸೆರೆಯಾದ ಬೆನ್ನಲ್ಲೆ ಮತ್ತೊಂದು ಚಿರತೆ ಅಲ್ಲಿಯೇ ಸಮೀಪ ಕ್ಯಾಮರಾದ ಕಣ್ಣಿಗೆ ಕಾಣಿಸಿಕೊಂಡಿದೆ.
ಚಿರತೆಯ ಮರಿಯನ್ನು ಹುಡುಕಿಕೊಂಡು ಅದರ ತಾಯಿ ಚಿರತೆ ಬರಬಹುದು ಎಂದು ಅರಣ್ಯ ಇಲಾಖೆ ಈ ಮೊದಲೇ ಊಹಿಸಿತ್ತು. ಅಲ್ಲದೆ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರಿಸಿತ್ತು. ಇದೀಗ ಅಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿರುವ ಫೋಟೊವೊಂದು ಲಭ್ಯವಾಗಿದೆ.
ನೈಟ್ ಬೀಟ್ ವಾಚ್ಮನ್ ಕಾರ್ಖಾನೆಯ ಒಳಗಡೆ ಗಸ್ತು ತಿರುಗುತ್ತಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ಸಿಬ್ಬಂದಿಯ ಜೀಪ್ಗೆ ಅಡ್ಡವಾಗಿ ಚಿರತೆ ಪಾಸ್ ಆಗಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಈ ಭಾಗದಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಇನ್ನಷ್ಟು ಸುದ್ದಿಗಳು