SHIVAMOGGA| MALENADUTODAY NEWS | ಮಲೆನಾಡು ಟುಡೆ Mar 15, 2025
ತೂಕದಲ್ಲಿ ಮೋಸ ಮಾಡುತ್ತಿದ್ದ ಎಪಿಎಂಸಿ ಯಾರ್ಡ್‌ನಲ್ಲಿರುವ ತರಕಾರಿ ಹಾಗೂ ದಿನಸಿ ಅಂಗಡಿಗಳ ಮೇಲೆ ಅಧಿಕಾರಿಗಳು ರೇಡ್ ನಡೆಸಿದ್ದು, ಈ ಸಂಬಂಧ ನಾಲ್ಕು ಅಂಗಡಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಹೌದು, ನಗರದ ಎಪಿಎಂಸಿ ಯಾರ್ಡ್‌ನಲ್ಲಿ ತರಕಾರಿ, ದಿನಸಿ ಅಂಗಡಿಗಳ ಮೇಲೆ ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳು ನಿನ್ನೆ ದಿನ ಶುಕ್ರವಾರ ದಿಢೀರ್ ದಾಳಿ ನಡೆಸಿದರು. ಈ ವೇಳೆ ಒಟ್ಟು 28 ಅಂಗಡಿಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಐದು ಅಂಗಡಿಗಳಲ್ಲಿ ಮೋಸ ಮಾಡಿರುವುದು ಪತ್ತೆ ಮಾಡಿದರು. ಐದು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದರು.
ಇನ್ನೂ ಇದೇ ವೇಳೆ ಮಾತನಾಡಿದ ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಎಚ್.ಎಸ್. ರಾಜು ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು, ದಿನಸಿ ಅಂಗಡಿ, ನ್ಯಾಯ ಬೆಲೆ ಅಂಗಡಿ, ಕೈಗಾರಿಕೋದ್ಯಮ ಸೇರಿದಂತೆ ಎಲ್ಲ ವರ್ತಕ ಹಾಗೂ ತಯಾರಿಕೆ ಸಮುದಾಯಗಳು ಅವರು ಬಳಸುವ ಮಾಪಕಗಳನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಯಿಂದ ಸತ್ಯಾಪನೆ ಮತ್ತು ಮುದ್ರೆ ಮಾಡಿಸಿಕೊಂಡೇ ಉಪಯೋಗಿಸತಕ್ಕದ್ದು, ಇಲ್ಲವಾದಲ್ಲಿ ದಿ ಲೀಗಲ್ ಮೆಟ್ರಾಲಜಿ ಆಕ್ಟ್ 2009 ಹಾಗೂ ನಿಯಮಗಳ ಅನ್ವಯ ತೂಕ, ಆಳತೆ, ಸಾಧನಗಳನ್ನು ಜಪ್ತಿ ಮಾಡಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.