ನಿನ್ನೆಯಷ್ಟೆ ನಟ ಕಿಚ್ಚ ಸುದೀಪ್ (Kichcha Sudeepa) ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ ಆತ್ಮೀಯರು, ಅವರ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದರು. ಬಿಜೆಪಿ ಪಕ್ಷ ಸೇರುವುದಿಲ್ಲ. ಆದರೆ ಬಸವರಾಜ ಬೊಮ್ಮಾಯಿಯವರು ತಮಗೆ ಬೇಕಾದವರು, ಅವರಿಗಾಗಿ ಅವರ ಪರ ಪ್ರಚಾರ ಮಾಡುತ್ತೇನೆ ಎಂದಿದ್ದರು. ಇದರ ಬೆನ್ನಲ್ಲೆ ಸುದೀಪ್ ವಿರುದ್ಧ ಚುನಾವಣಾ ಆಯೋಗಕ್ಕೆ ಮನವಿಯೊಂದು ಸಲ್ಲಿಕೆಯಾಗಿದೆ.

ಶಿವಮೊಗ್ಗದ ವಕೀಲರು ಕೆ.ಪಿ.ಶ್ರೀಪಾಲ್, ನಟ ಕಿಚ್ಚ ಸುದೀಪ್ ನಟಿಸಿರುವ ಚಲನಚಿತ್ರ ಹಾಗೂ ಜಾಹಿರಾತು ಪ್ರದರ್ಶನವನ್ನು ತಡೆ ಹಿಡಿಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ಧಾರೆ. ಈ ಸಂಬಂಧ ಪತ್ರ ಇಮೇಲ್ ಮಾಡಿರುವ ಅವರು, ತಮ್ಮ ಮನವಿಯನ್ನು ಸೋಶಿಯಲ್ ಮೀಡಿಯಾ ಅಕೌಂಟ್ನಲ್ಲಿ ಪ್ರಕಟಿಸಿದ್ದಾರೆ.

ಮನವಿಯಲ್ಲಿ ಏನಿದೆ.
ಮಾನ್ಯರೆ,
ವಿಷಯ: ನೀತಿ ಸಂಹಿತೆ ಅನುಸಾರ ಮಾನ್ಯ ಕಿಚ್ವ ಸುದೀಪ್ ಇವರ ಚಲನಚಿತ್ರಗಳನ್ನು , ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳನ್ನು ಚುನಾವಣೆ ಮುಗಿಯುವ ವರೆಗೂ ತಡೆ ಹಿಡಿಯುವಂತೆ.
ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ, ತಿಳಿಸುವುದೇನೆಂದರೆ, ಕನ್ನಡದ ಚಲನಚಿತ್ರನಟ ಮಾನ್ಯ ಕಿಚ್ಚ ಸುದೀಪ್ ರವರು ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವ ವರೆಗೂ ಅವರ ನಟನೆಯ ಯಾವುದೇ ಚಲನ ಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿ.ಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ.ಶೋಗಳು ಪ್ರಸಾರವಾಗದಂತೆ ಮತ್ತು ಅವರು ನಟಿಸಿರುವ ಜಾಯಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಜರುಗಿಸಬೇಕು.
ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನ ಚಿತ್ರಗಳು, ಮತ್ತು ಟಿ.ವಿ.ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ, ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂದಿಸಿದಂತೆ ತುರ್ತು ಕ್ರಮ ಜರುಗಿಸಬೇಕೆಂದು, ಒಬ್ಬ ಜವಬ್ದಾರಿಯುತ ನಾಗರೀಕನಾಗಿ ಒತ್ತಾಯಿಸುತ್ತಿದ್ದೇನೆ.
ವಂದನೆಗಳೊಂದಿಗೆ.
ಕೆ.ಪಿ.ಶ್ರೀಪಾಲ.
ವಕೀಲರು.
9448329757.
Read /ಶಿವಮೊಗ್ಗದ ಈ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್ ಲೆಟರ್ನಲ್ಲಿ ಏನಿದೆ ಗೊತ್ತಾ
Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !
Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ 1 ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ
Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್
Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್!
Read / Bhadravati/ ಪರ್ಮಿಶನ್ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್ಗೆ ಸೇರಿದ ವಾಹನ ಜಪ್ತಿ
Read / ತೀರ್ಥಹಳ್ಳಿಯಲ್ಲಿ ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ
Read / ಆಯನೂರು ಮಂಜುನಾಥ್ ಕಾಂಗ್ರೆಸ್ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್!
Read/ ಸಾಗರಕ್ಕೆ ಬರುತ್ತಿದ್ದ ಬಸ್ ಅಪಘಾತ/ ಸ್ಟೇರಿಂಗ್ ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS
HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada Kichcha Sudeep, Kichcha Sudeep support BJP, Sudeep saath to CM, Basavaraj Bommai, Kichcha Sudeep’s film, advertisement, Sudeep election, complaint against Sudeep, threat to Sudeep, Appeal to Election Commission, Appeal to Election Commission, Appeal against Sudeep, Advocate, KP Sripal, Central Election Commission, Violation of Model Code of Conduct. ಕಿಚ್ಚ ಸುದೀಪ್, ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ, ಸಿಎಂ ಗೆ ಸುದೀಪ್ ಸಾಥ್, ಬಸವರಾಜ ಬೊಮ್ಮಾಯಿ, ಕಿಚ್ಚ ಸುದೀಪ್ ಸಿನಿಮಾ, ಜಾಹಿರಾತು, ಸುದೀಪ್ ಎಲೆಕ್ಷನ್, ಸುದೀಪ್ ವಿರುದ್ಧ ದೂರು, ಸುದೀಪ್ಗೆ ಬೆದರಿಕೆ, ಚುನಾವಣಾ ಆಯೋಗ, ಆಯೋಗಕ್ಕೆ ಮನವಿ, ಸುದೀಪ್ ವಿರುದ್ಧ ಮನವಿ, ವಕೀಲ, ಕೆಪಿ ಶ್ರೀಪಾಲ್, ಕೇಂದ್ರ ಚುನಾವಣಾ ಆಯೋಗ, ನೀತಿ ಸಂಹಿತೆ ಉಲ್ಲಂಘನೆ ,