KARNATAKA NEWS/ ONLINE / Malenadu today/ Aug 22, 2023 SHIVAMOGGA NEWS
ಶಿವಮೊಗ್ಗದ ಹೊಳೆಹೊನ್ನೂರು ಗಾಂಧೀಜಿ ಸರ್ಕಲ್ ನಲ್ಲಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಭಾನುವಾರ ಜಿಲ್ಲೆಯ ಹೊಳೆಹೊನ್ನೂರು ಸರ್ಕಲ್‍ನಲ್ಲಿದ್ದ ಗಾಂಧಿಪ್ರತಿಮೆಯನ್ನು ದ್ವಂಸಗೊಳಿಸಿ ದೇಶವಿರೋಧಿ ಕೃತ್ಯವನ್ನು ಕೆಲ ಕಿಡಿಗೇಡಿಗಳು ನಡೆಸಿದ್ದಾರೆ. ಈ ಕೃತ್ಯವನ್ನು ಶಿವಮೊಗ್ಗ ಗ್ರಾಮಾಂತರ ಎನ್.ಎಸ್.ಯು.ಐ. ತೀವ್ರವಾಗಿ ವಿರೋಧಿಸುತ್ತದೆ.
ಮಹಾತ್ಮಾಗಾಂಧಿ ವಿಶ್ವಶಾಂತಿಯನ್ನು ಬಯಸಿದವರು. ಹಾಗಾಗಿಯೇ ಭಾರತ ಸ್ವಾತಂತ್ರ್ಯ ಚಳುವಳಿಯಲ್ಲಿ ಧುಮುಕಿ ಶಾಂತಿಯ ಮಾರ್ಗದಿಂದಲೇ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟು ರಾಷ್ಟ್ರಪಿತ ಎನಿಸಿಕೊಂಡಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳುವಳಿಯ ಹಿನ್ನಲೆ ತಿಳಿಯದ, ಸಂವಿಧಾನ ಮತ್ತು ಕಾನೂನಿಗ ಬಗ್ಗೆ ಗೌರವ ಇರದ ಕಿಡಿಗೇಡಿಗಳು ನಡುರಾತ್ರಿಯಲ್ಲಿ ರಾಷ್ಟ್ರಪಿತನ ಪ್ರತಿಮೆಯನ್ನು ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದಾರೆ.
ಕಿಡಿಗೇಡಿಗಳ ಈ ಕೃತ್ಯದಿಂದ ನಮಗೆ ಆಘಾತವಾದಂತಾಗಿದ್ದು, ಸಂವಿಧಾನ ಮತ್ತು ಕಾನೂನಿಗ ಬಗ್ಗೆ ಗೌರವ ಇಲ್ಲದ ಕಿಡಿಗೇಡಿಗಳ ಕೃತ್ಯ ಕ್ಷಮಿಸಲಾಗದ್ದಾಗಿದೆ. ಸಮಾಜದಲ್ಲಿ ಶಾಂತಿಯನ್ನು ಕದಡುವ ವಿಧ್ವಂಸಕ ಶಕ್ತಿಗಳಿಂದ ಮಾತ್ರ ಇಂತಹ ಹೀನಕೃತ್ಯ ನಡೆಸಲು ಸಾಧ್ಯ. ಜಿಲ್ಲಾ ರಕ್ಷಣಾಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ದೇಶದ್ರೋಹಿ ಕೃತ್ಯವನ್ನೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕು. ರಾಷ್ಟ್ರಪಿತನ ಪ್ರತಿಮೆಗಾದ ಅಪಮಾನದಿಂದಾಗಿ ಹೊಳೆಹೊನ್ನೂರಿನಲ್ಲಿ ಬೂದಿಮುಚ್ಚಿದ ಕೆಂಡದ ವಾತಾವರಣವಿದ್ದು, ಯಾವುದೇ ರೀತಿಯ ಅಶಾಂತಿ ಸೃಷ್ಟಿಯಾಗದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.
ಇನ್ನಷ್ಟು ಸುದ್ದಿಗಳು
ಉದ್ಯೋಗಕ್ಕಾಗಿ ಹುಡಕಾಡ್ತಿದ್ದೀರಾ? ಇಲ್ಲಿದೆ ಅವಕಾಶ! ವಿದ್ಯಾರ್ಹತೆ ಎಸ್ಎಸ್ಎಲ್ಸಿ-ಪದವಿ! ಪೂರ್ತಿ ವಿವರ ಇಲ್ಲಿದೆ
ಶಿವಮೊಗ್ಗ ನಗರದ ಈ ಪ್ರಮುಖ ಭಾಗಗಳಲ್ಲಿ ದಿನವಿಡಿ ಇರೋದಿಲ್ಲ ವಿದ್ಯುತ್! ಯಾವಾಗ? ಎಲ್ಲೆಲ್ಲಿ ? ವಿವರ ಇಲ್ಲಿದೆ
