shivamogga Mar 14, 2024 ವೈದ್ಯ,ಅರೆವೈದ್ಯಕೀಯ ಹುದ್ದೆಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮಾ.19ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30 ರವರೆಗೆ ಅರ್ಜಿಯ ನಮೂನೆಯನ್ನು ಎನ್.ಎಚ್.ಎಂ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಎಚ್ ರಸ್ತೆ ಶಿವಮೊಗ್ಗ ಇಲ್ಲಿ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-200337 ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳು ತಿಳಿಸಿದ್ದಾರೆ.