KARNATAKA NEWS/ ONLINE / Malenadu today/ Nov 3, 2023 SHIVAMOGGA NEWS
SHIVAMOGGA |
ಅರ್ಜಿ ಆಹ್ವಾನ; ಅವಧಿ ವಿಸ್ತರಣೆ
ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಜನರಿಂದ ಆರ್ಥಿಕ ನೆರವು ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಅ. 30 ರಿಂದ ನ. 10 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
READ | ಮೆಸ್ಕಾಂ ಪ್ರಕಟಣೆ | ನ.05 ರಂದು ಶಿವಮೊಗ್ಗದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್
ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
2023-24 ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳು ಸೇವಾಸಿಂಧು ಮೂಲಕ ಆನ್‍ಲೈನ್ ಅರ್ಜಿಗಳನ್ನು ಸಲಿಸಲು ದಿ: 31-11-2023 ಕಡೆಯ ದಿನವಾಗಿರುತ್ತದೆ.
ವಿದ್ಯಾರ್ಥಿಗಳ ಪೊಷಕರ ವಾರ್ಷಿಕ ಆದಾಯವರು ರೂ. 6 ಲಕ್ಷಗಳ ಒಳಗಿದ್ದಲ್ಲಿ ಎರಡು ವರ್ಷಗಳ ಕೋರ್ಸ್‍ಗೆ ಗರಿಷ್ಟ ರೂ.20 ಲಕ್ಷಗಳ ಮಿತಿಯಲ್ಲಿ ವಿದ್ಯಾರ್ಥಿವೇತನ ಭರಿಸಲಾಗುವುದು(ಒಂದು ವರ್ಷಕ್ಕೆ ರೂ.10 ಲಕ್ಷಗಳಂತೆ). ಪೋಷಕರ ವಾರ್ಷಿಕ ಆದಾಯವು ರೂ.6 ಲಕ್ಷದಿಂದ ರೂ.15 ಲಕ್ಷಗಳ ಒಳಗಿದ್ದಲ್ಲಿ ಎರಡು ವರ್ಷಗಳ ಕೋರ್ಸ್‍ಗೆ ರೂ.10 ಲಕ್ಷಗಳ ಗರಿಷ್ಟ ಮಿತಿಯಲ್ಲಿ ವಿದ್ಯಾರ್ಥಿವೇತನ ಪಾವತಿಸುವುದು(ಒಂದು ವರ್ಷಕ್ಕೆ ರೂ.5 ಲಕ್ಷಗಳಂತೆ).
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೇಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ದೂ.ಸಂ: 08182-220206 https://dom.karnataka.gov.in/shimoga/public ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಜಿಲ್ಲಾ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2023-24 ನೇ ಸಾಲಿನಲ್ಲಿ ನೇರಸಾಲ ಯೋಜನೆ, ಉದ್ಯಮಾ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಲಾಗಿದೆ.
ಆಸಕ್ತ ಫಲಾಪೇಕ್ಷಿಗಳು ಶಿವಮೊಗ್ಗ-1, ಗ್ರಾಮ-1, ಕರ್ನಾಟಕ-1, ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ https://sevasindhu.karnataka.gov.in ರ ಮೂಲಕ ನ.29 ರೊಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-224349 ನ್ನು ಸಂಪರ್ಕಿಸುವುದು.
ಅರ್ಜಿ ಆಹ್ವಾನ; ಅವಧಿ ವಿಸ್ತರಣೆ
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಸಮುದಾಯ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಜನರಿಂದ ಆರ್ಥಿಕ ನೆರವು ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ನ. 02 ರಿಂದ ನ. 10 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳ ವತಿಯಿಂದ 2023-24 ನೇ ಸಾಲಿನಲ್ಲಿ ನೇರಸಾಲ ಯೋಜನೆ, ಉದ್ಯಮಾ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಲಾಗಿದೆ.
ಆಸಕ್ತ ಫಲಾಪೇಕ್ಷಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ https://sevasindhu.karnataka.gov.in ರ ಮೂಲಕ ನ.29 ರೊಳಗೆ ಅರ್ಜಿಗಳನ್ನು ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-276776 ನ್ನು ಸಂಪರ್ಕಿಸುವುದು.
