ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

Malenadu Today

KARNATAKA NEWS/ ONLINE / Malenadu today/ May 3, 2023 GOOGLE NEWS


ಶಿವಮೊಗ್ಗ/  ಮಾಜಿ ಸೈನಿಕರಿಂದ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯವರ ಚಿತ್ರದುರ್ಗದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಓದಿ :  ನಾನೊಬ್ಬ ಬಜರಂಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ  ‘ಬ್ಯಾನ್​ ಅಸ್ತ್ರ’ ಶುರುವಾಯ್ತು ನಾಯಿ ಬಿಡುವ ಅಭಿಯಾನ!

ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಮೇ-05ರಂದು ಮ.01 ಗಂಟೆಯೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.   

ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220925 ನ್ನು ಸಂಪರ್ಕಿಸುವುದು.

ಓದಿ : BREAKING NEWS /  ಪ್ರಯಾಣಿಕರ ಗಮನಕ್ಕೆ ಇವತ್ತು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ! ಕಾರಣ ಇಲ್ಲಿದೆ 


ಸಾಗರ ಪೇಟೆಯಲ್ಲಿ ಬೈಕ್​ನಲ್ಲಿ ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ

ಸಾಗರ/ ಶಿವಮೊಗ್ಗ  ಬೃಹತ್​ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. 

ಹೇಗಾಯ್ತು ಘಟನೆ

ಬೈಕ್​ನಲ್ಲಿ ಸಂಬಂಧಿಕರ ಜೊತೆ ಹೋಗುತ್ತಿದ್ದ ಮಹಿಳೆಗೆ, ಲಾರಿಯು ಡಿಕ್ಕಿಯಾಗಿದೆ. ಪರಿಣಾಮ ಅವರು ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಲಾರಿ ಚಕ್ರವೂ ಮಹಿಳೆಯ ಮೇಲೆ ಹರಿದಿದೆ. ತಕ್ಷಣವೇ ಅಲ್ಲಿದ್ದವರು ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ. 

ಘಟನೆ ಸಂಬಂದ ಸಾಗರ ಟೌನ್ ಪೊಲೀಸ್ (sagara town police) ಕೇಸ್​ ದಾಖಲಿಸಿಕೊಂಡಿದ್ದು, ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ಧಾರೆ. 

 


ಒಂದೇ ಕೇಸ್​ನಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ ! ಕಾರಣ ಗೊತ್ತಾ?

ಭದ್ರಾವತಿ/ ಶಿವಮೊಗ್ಗ ತನಗಿಂತ 20 ವರ್ಷ ಕಡಿಮೆ ವಯಸ್ಸಿನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ, ಭದ್ರಾವತಿಯ ವ್ಯಕ್ತಿಯೊಬ್ಬರಿಗೆ ಕೋರ್ಟ್​ ಬರೋಬ್ಬರಿ 20 ವರ್ಷ ಶಿಕ್ಷೆ ವಿಧಿಸಿದೆ. 

ಏನಿದು ಕೇಸ್​

2019 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 33 ವರ್ಷದ ವ್ಯಕ್ತಿಯೊಬ್ಬ, 13 ವರ್ಷದ ಅಪ್ರಾಪ್ತೆಗೆ  ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಆನಂತರ ಕೇಸ್​ನ ತನಿಖೆ ಕೈಗೊಂಡ ಭದ್ರಾವತಿ ಗ್ರಾಮಾಂತರ ವೃತ್ತದ ಸಿಪಿಐ ಮಂಜುನಾಥ್​  ಆರೋಪಿ ವಿರುದ್ಧ  ಕೋರ್ಟ್​ ಚಾರ್ಜ್ ಶೀಟ್​ ಸಲ್ಲಿಸಿದ್ರು.  

ಸದ್ಯ ಈ ಕೇಸ್​ನ ವಿಚಾರಣೆ ನಡೆದು  The Addl District and Sessions Court, FTSC–II (POCSO) Shivamogga ನ್ಯಾಯಾಲಯ ತೀರ್ಪು ನೀಡಿದೆ. 

ಏನು ಶಿಕ್ಷೆ ?

ನ್ಯಾಯಾಧೀಶರು ದಿನಾಂಕ: 02-05-2023ರಂದು ಆರೋಪಿಗೆ ಶಿಕ್ಷೆ ವಿಧಿಸಿದ್ದು 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡಿಸಿದ್ರು. 


Malenadutoday.com Social media

Share This Article