ಕಲ್ಯಾಣ ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ

Applications invited for the post of Welfare Organizer ಕಲ್ಯಾಣ ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ

ಕಲ್ಯಾಣ ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS 

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಿಕರ ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ್ಯಾಂಕ್‍ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯಾದ ದಿನಾಂಕದಿಂದ 20 ದಿನದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.  ಈ ಕುರಿತಂತೆ ಅಧಿಸೂಚನೆ ಸಂಖ್ಯೆ ಸೈಕಪುಇ/ಸಿಬ್ಬಂದಿ/134/ಗ್ರೂಪ್ ಸಿ/2023 ದಿನಾಂಕ 13 ಜುಲೈ 2023 ಹಾಗೂ ಕರ್ನಾಟಕ ರಾಜ್ಯ ಪತ್ರ ದಿನಾಂಕ 18 ಜುಲೈ 2023 ರ ಸಂಚಿಕೆ-140 ರ ಭಾಗ-5 ರಲ್ಲಿ ಪ್ರಕಟಿಸಲಾದ ಪ್ರಕಟಣೆಯನ್ನು ಅನುಸರಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂರವಾಣಿ ಸಂಖ್ಯೆ 080-25589459 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. 

ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 21: (ಕರ್ನಾಟಕ ವಾರ್ತೆ): ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಎಸ್.ಎಸ್.ಎಲ್.ಸಿ ಮತ್ತು 2ನೇ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ “ಜನರಲ್ ಕೆ.ಎಸ್. ತಿಮ್ಮಯ್ಯ” ನಗದು ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 30-10-2023 ರೊಳಗಾಗಿ ಸಲ್ಲಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. 

ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 21: (ಕರ್ನಾಟಕ ವಾರ್ತೆ): ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದನೇ ತರಗತಿಯಿಂದ ಪಿ.ಯು.ಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಡಿಗ್ರಿ / ಡಿಪ್ಲೋಮಾ ಜೆ.ಓ.ಸಿ / ಪ್ರೊಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 30-09-2023 ರೊಳಗಾಗಿ ಸಲ್ಲಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!