Financial Aid ಶಿವಮೊಗ್ಗ, ಆಗಸ್ಟ್ 25 ಮಲೆನಾಡುಟುಡೆ ನ್ಯೂಸ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ, ಮೀನುಗಾರಿಕೆ ಇಲಾಖೆಯು ನಾಲ್ಕು ಚಕ್ರಗಳ ವಾಹನ ಖರೀದಿಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಪ್ರಕಟಣೆ ನೀಡಲಾಗಿದೆ. ಪ್ರಕಟಣೆಯ ವಿವರ ಹೀಗಿದೆ.
2025-26ನೇ ಸಾಲಿನ ಯೋಜನೆಯಡಿ, ಪ್ರತಿ ವಾಹನದ ಖರೀದಿ ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಠ ₹3 ಲಕ್ಷದವರೆಗೆ ಆರ್ಥಿಕ ನೆರವನ್ನು ಒದಗಿಸಲಾಗುತ್ತಿದೆ.

ಶಿವಮೊಗ್ಗ ಜಿಲ್ಲೆಗೆ ಪರಿಶಿಷ್ಟ ಜಾತಿಗೆ 2 ಮತ್ತು ಪರಿಶಿಷ್ಟ ಪಂಗಡಕ್ಕೆ 1 ಫಲಾನುಭವಿಗಳನ್ನು ಆಯ್ಕೆ ಮಾಡುವ ಗುರಿಯನ್ನು ನಿಗದಿಪಡಿಸಲಾಗಿದೆ.
ಅರ್ಹ ಮೀನು ವ್ಯಾಪಾರಿಗಳು ಸೆಪ್ಟೆಂಬರ್ 20, 2025ರ ಒಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕಿನ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.