ವಕೀಲರ ಹುದ್ದೆಗೆ ಅರ್ಜಿ ಆಹ್ವಾನ /ಅಂಚೆ ಸೇವಕರ ನೇಮಕಾತಿಗೆ ಸಲ್ಲಿಸಿ ಅಪ್ಲಿಕೇಶನ್​ – 10 ನೇ ಕ್ಲಾಸ್ ಪಾಸಾದವರಿಗೂ ಅವಕಾಶ SHIVAMOGGA JOB NEWS

Malenadu Today

KARNATAKA NEWS/ ONLINE / Malenadu today/ Aug 5, 2023 SHIVAMOGGA NEWS 

ಸಹಾಯಕ ಸರ್ಕಾರಿ ಅಭಿಯೋಜಕರು/ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯಲ್ಲಿ 12 ಸಹಾಯಕ ಸರ್ಕಾರಿ ಅಭಿಯೋಜಕರು/ವಕೀಲರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. 

ಆಸಕ್ತರು ಅರ್ಜಿಯನ್ನು ದಿ:20/08/2023ರೊಳಗಾಗಿ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ.ಎಂ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಅಭಿಯೋಜಕರ ಕಚೇರಿ, 4ನೇ ಮಹಡಿ, ಹೆಚ್ಚುವರಿ ನ್ಯಾಯಾಲಯಗಳ ಸಂಕೀರ್ಣ, ಬಾಲರಾಜ ಅರಸ್ ರಸ್ತೆ, ಶಿವಮೊಗ್ಗದ ಸೂಚನಾ ಫಲಕದಲ್ಲಿ ಪ್ರಕಟಿಸಲಾದ ಮಾಹಿತಿಯನ್ನು ಪಡೆಯಬಹುದಾಗಿದೆ. 

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ 10ನೇ ತರಗತಿ ಪಾಸಾಗಿರುವ 18-40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತರು ಅಂಚೆ ವೆಬ್‍ಸೈಟ್ www.indiapostgdsonline.gov.in ರಲ್ಲಿ ದಿ: 23/08/2023ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಹೆಚ್ಚಿನ ಮಾಹಿತಿಗಾಗಿ ಆಯಾ ವಿಭಾಗದ ಅಂಚೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222516ನ್ನು ಸಂಪರ್ಕಿಸುವುದು.

ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಆಗಸ್ಟ್ 05 (ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರೀಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 01 ಸಂಸ್ಥೆ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.

ಆಸಕ್ತರು ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಶಿವಮೊಗ್ಗ ಈ ಕಚೇರಿಯಿಂದ ಪಡೆದು ಆಗಸ್ಟ್ 14 ರೊಳಗೆ ತ್ರಿಪ್ರತಿಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್‍ಎನ್‍ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ www.dwdsc.karnataka.gov.in ಪರಿಶೀಲಿಸುವಂತೆ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ಎಂ.ದೊಡ್ಡಮನಿ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು 

 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

Share This Article