ಕುರಿ ಮತ್ತು ಮೇಕೆ ಘಟಕ ಸ್ಥಾಪಿಸುವ ಪ್ಲಾನ್​​ ಇದಿಯಾ : ಹಾಗಾದ್ರೆ ಈ ಸುದ್ದಿ ನಿಮಗಾಗಿ

ಹಂಚಿಕೊಳ್ಳಿ
WhatsApp Facebook X Telegram
Sheep and Goat Farming Training 2026  Apply Now Subsidy for Goat Units in Shivamogga
Sheep and Goat Farming Training 2026  Apply Now Subsidy for Goat Units in Shivamogga

ಶಿವಮೊಗ್ಗ: ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನಿಸಿದೆ . ಪಶು ಸಂಗೋಪನೆಯಲ್ಲಿ ತೊಡಗಿಕೊಳ್ಳಲು ಇಚ್ಛಿಸುವ ಅರ್ಹ ಆಸಕ್ತರು ಈ ಯೋಜನೆಯ ಲಾಭ ಪಡೆಯಬಹುದು ಎಂದು ನಿಗಮ ತಿಳಿಸಿದೆ.

ಘಾನಾದಲ್ಲಿ ನಾಟಿ ಔಷಧಿ ಮಾರಲು ಹೋದ ಶಿವಮೊಗ್ಗದ 24 ಮಂದಿಗೆ ಆಘಾತ. ಏನಿದು ಘಟನೆ 

Apply Now ಅರ್ಜಿ ಸಲ್ಲಿಸಲು ಅರ್ಹತೆಗಳೇನು?

ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಪರಿಶಿಷ್ಟ ಜಾತಿ (SC) ಅಥವಾ ಪರಿಶಿಷ್ಟ ಪಂಗಡಕ್ಕೆ (ST) ಸೇರಿದವರಾಗಿರಬೇಕು. ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗೂ ಈಗಾಗಲೇ ಪಶು ಸಂಗೋಪನೆಯಲ್ಲಿ ಆಸಕ್ತಿ ಹೊಂದಿರುವ 18 ರಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ (Eligibility criteria). ಅಭ್ಯರ್ಥಿಗಳು ಮಾನ್ಯತೆ ಪಡೆದ ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು ಮತ್ತು ಸರ್ಕಾರದ ‘ಫ್ರೂಟ್ಸ್’ (FRUITS) ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿರಬೇಕು 

Apply Now ಮೀಸಲಾತಿ ಮತ್ತು ಆದ್ಯತೆ:

ಈ ಯೋಜನೆಯಲ್ಲಿ ಸಾಮಾಜಿಕ ಸಮಾನತೆಗೆ ಒತ್ತು ನೀಡಲಾಗಿದ್ದು, ಮಹಿಳಾ ಫಲಾನುಭವಿಗಳಿಗೆ ಶೇ. 33.3 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಅಲ್ಲದೆ, ವಿಶೇಷಚೇತನ ಅಭ್ಯರ್ಥಿಗಳಿಗೆ ಶೇ. 3 ರಷ್ಟು ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ 

ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಜಿಲ್ಲೆಯ ಎಲ್ಲಾ ತಾಲೂಕು ಪಶು ಆಸ್ಪತ್ರೆಗಳಲ್ಲಿ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳಬಹುದು . ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 10 ರೊಳಗಾಗಿ ಜಿಲ್ಲಾ ಅನುಷ್ಠಾನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

Apply Now Subsidy for Goat Units in Shivamogga
Apply Now Subsidy for Goat Units in Shivamogga
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor