ನವೆಂಬರ್ 22, 2025 : ಮಲೆನಾಡು ಟುಡೆ : ಶಿವಮೊಗ್ಗದಲ್ಲಿ ಹಲ್ಲೆಯಂತಹ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ ಶಿವಮೊಗ್ಗ ಸಿಟಿ ಪೊಲೀಸರು ಮತ್ತೊಮ್ಮೆ ಏರಿಯಾ ಡಾಮಿನೇಷನ್ ಗಸ್ತನ್ನು ಚುರುಕುಗೊಳಿಸಿದ್ದಾರೆ. ಇತ್ತೀಚೆಗೆ ಆರ್ಎಂಎಲ್ ನಗರದಲ್ಲಿ ನಡೆದ ಘಟನೆ ಸಂಬಂಧ ಶಾಸಕ ಎಸ್ಎನ್ ಚನ್ನಬಸಪ್ಪರವರು ಸಿಟಿಯಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮತ್ತಷ್ಟು ಗಂಭೀರವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಎರಡು ಏರಿಯಾ ಡಾಮಿನೇಷನ್ ಕಾರ್ಯಾಚರಣೆಯಲ್ಲಿ 8 ಮಂದಿ ವಿರುದ್ಧ ಮಾದಕ ವಸ್ತು ಸೇವನೆ ಆರೋಪದ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಕ್ರಿಕೆಟ್: ಸಾಗರದ ವಿರಾಟ್ ಆರ್. ಗಣ್ಯಗೆ ಕರ್ನಾಟಕ ತಂಡದಲ್ಲಿ ಸ್ಥಾನ
ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ/Area Domination special operation in Shivamogga
ವಿಶೇಷವಾಗಿ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿಯೇ ಎರಿಯಾ ಡಾಮಿನೇಷನ್ ಕಾರ್ಯಾಚರಣೆ ಚುರುಕುಗೊಳಿಸಿರುವ ಪೊಲೀಸರು.ಮಾದಕ ದ್ರವ್ಯ ಸೇವನೆ ಮತ್ತು ಸಾರ್ವಜನಿಕ ಶಾಂತಿ ಕದಡುವ ಕೃತ್ಯಗಳಿಗೆ ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ.
ಚಳ್ಳಕೆರೆ ಬಳಿ ಲಾರಿಗೆ ಕಾರು ಡಿಕ್ಕಿ! ಬಳ್ಳಾರಿಗೆ ಹೋಗುತ್ತಿದ್ದ ಶಿವಮೊಗ್ಗದ ಮೂವರಿಗೆ ಪೆಟ್ಟು! ಓರ್ವ ಸಾವು
ದಿನಾಂಕ: 21-11-2025 ರಂದು ರಾತ್ರಿ ಕೈಗೊಂಡ ಕಾರ್ಯಾಚರಣೆಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಜಂಟಿಯಾಗಿ ಜನದಟ್ಟಣೆ ಇರುವ ಪ್ರದೇಶಗಳಾದ ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆಸುಪಾಸು, ಮಂಜುನಾಥ್ ಬಡಾವಣೆ, ಇಲಿಯಾಸ್ ನಗರ, ಬುದ್ಧ ನಗರ ಹಾಗೂ ಮಿಳ್ಳಘಟ್ಟ ಪ್ರದೇಶಗಳಲ್ಲಿ ಎರಿಯಾ ಡಾಮಿನೇಷನ್ ನಡೆಸಿದೆ.
ಜೂನಿಯರ್ ಹಾಕಿ ವಿಶ್ವಕಪ್‌ಗೆ ಶಿವಮೊಗ್ಗದ ಸುನಿಲ್ ಪಿ.ಬಿ. ಆಯ್ಕೆ!
ಈ ವೇಳೆ ಅನುಮಾನ ಬಂದ ಒಟ್ಟು 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಎಲ್ಲಾ ಎಂಟು ಮಂದಿಯನ್ನು ಪೊಲೀಸ್ ಠಾಣೆಗೆ ಕರೆತಂದು, ನಂತರ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ವರದಿಯ ಪರಿಶೀಲನೆಯ ನಂತರ, 8 ಜನರ ಪೈಕಿ 4 ಜನರು ಗಾಂಜಾವ ಸೇವನೆ ಮಾಡಿರುವುದು ದೃಡಪಟ್ಟಿದೆ. ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಸಮುದ್ರದ ಅಲೆಯಲ್ಲಿ ಕೊಚ್ಚಿಹೋದ ಶಿವಮೊಗ್ಗದ ನಿವಾಸಿ! ನಡೆದಿದ್ದೇನು?
ಬಸ್ ನಿಲ್ದಾಣ ನಿಲ್ದಾಣದ ಸುತ್ತಮುತ್ತ ತಪಾಸಣೆ/Area Domination special operation in Shivamogga
ಇನ್ನೂ ಇದಕ್ಕೂ ಮೊದಲು 19-11-2025 ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಆರ್.ಎಂ.ಎಲ್ ನಗರ, ಬುದ್ಧ ನಗರ ಹಾಗೂ ಮಿಳ್ಳಘಟ್ಟ ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಕೇಂದ್ರೀಕರಿಸಿ ತಪಾಸಣೆ ನಡೆಸಲಾಗಿತ್ತು. ಈ ವಿಶೇಷ ಕಾರ್ಯಾಚರಣೆಯ ಸಮಯದಲ್ಲಿ 24 ಜನರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಅವರನ್ನೆಲ್ಲಾ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ನಾಲ್ವರು ಗಾಂಜಾ ಸೇವನೆ ಮಾಡಿದ್ದು ಬೆಳಕಿಗೆ ಬಂದಿತ್ತು.
ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೀತು, ಇ-ಪೇಪರ್ ಓದಿ
ಸೇವನೆ ದೃಢಪಟ್ಟ ಈ ಎಲ್ಲಾ 8 ಮಂದಿ ವಿರುದ್ಧ ಎನ್.ಡಿ.ಪಿ.ಎಸ್ (NDPS Act) ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ತೊಂದರೆ ಉಂಟುಮಾಡುವವರ ವಿರುದ್ಧ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಮತ್ತು ಮಾದಕ ದ್ರವ್ಯಗಳನ್ನು ಸೇವನೆ ಮಾಡುವವರ ವಿರುದ್ಧ ಹಾಗೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಅಥವಾ ಭಾಗಿಯಾಗುವ ಸಂಶಯಾಸ್ಪದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
