MALENADUTODAY.COM |SHIVAMOGGA| #KANNADANEWSWEB
ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾನವ ಹಕ್ಕುಗಳ ಹೋರಾಟ ಸಮಿತಿ ಮುಖಂಡರು,ಭದ್ರಾವತಿ ಕ್ಷೇತ್ರದ ಬಿಳಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಲೆ ಬಸಾಪುರ ಗ್ರಾಮದಲ್ಲಿ ಗ್ರಾಮ ಠಾಣಾ ಸರ್ವೆ ನಂಬರ್ 999 ರಲ್ಲಿ ಐದು ಎಕರೆ 18 ಗುಂಟೆ ಜಮೀನು ಖಾಲಿಯಿದ್ದು, ಈ ಜಾಗವನ್ನು ಬಡವರ ನಿವೇಶನಕ್ಕೆ ನೀಡಬೇಕೆಂದು 25 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ.
ಈ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿತೊಂಡು ಬಾಡಿಗೆ ಮನೆಯಲ್ಲಿ ವಾಸಿಸುವವರ ಸಂಖ್ಯೆ ಹೆಚ್ಚಿದೆ. ಮಳೆಗಾಲದಲ್ಲಿ ಸೂರುಗಳು ಸೋರುತ್ತಿವೆ. .ಇಲ್ಲಿನ ಬಡವರು ನಿವೇಶನಕ್ಕಾಗಿ ಹಲವಾರು ಬಾರಿ ಹೋರಾಟ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿವೇಶನ ನೀಡಬೇಕೆಂದು ತೀರ್ಮಾನವಾಗಿದ್ದರೂ, ಶ್ರೀಮಂತರಿಗೂ ನಿವೇಶನ ಮಂಜೂರು ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಆರೋಪಿಸಿದೆ.
ಫಲಾನುಭಾವಿಗಳನ್ನು ಗುರುತಿಸದೆ ನಾಲ್ಕೈದು ಗ್ರಾಮ ಸಭೆ ಗಳನ್ನು ಮುಂದೂಡುತ್ತಾ ಬರಲಾಗಿದೆ.ಇದು ಬಡವರಿಗೆ ದಕ್ಕಬೇಕಾದ ಮೂಲಭೂತ ಸೌಕರ್ಯದ ಮಾನವ ಹಕ್ಕಿನ ಉಲ್ಲಂಘನೆಯಾಗಿದೆ.ನಿವೇಶನ ವಂಚಿತ ಗ್ರಾಮಸ್ಥರು ಈ ಬಾರಿ ಚುನಾವಣೆ ಬಹಿಷ್ಕಾರ ಮಾಡಲಿದ್ದು,ಪ್ರತಿಭಟನೆ ನಡೆಸಲಾಗುವುದು ಎಂದು ಮಾನವ ಹೋರಾಟ ಸಮಿತಿ ಎಚ್ಚರಿಸಿದೆ.
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #