ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರಿಗೆ ಇರಿತ! ಮೂವರ ವಿರುದ್ಧ FIR!

ಹಂಚಿಕೊಳ್ಳಿ
WhatsApp Facebook X Telegram
Attempt to murder case Shikaripura, Stabbing incident in hospital,
Attempt to murder case Shikaripura, Stabbing incident in hospital,

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025  : ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರ ಮೇಲೆ ಚಾಕುವಿನಿಂದ ಇರಿದ ಘಟನೆ ಸಂಬಂಧ ಕೇಸ್ ದಾಖಲಾಗಿದೆ. ಶಿಕಾರಿಪುರ ಟೌನ್​ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕೊಲೆಯತ್ನದ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗಿದೆ. 

ಜಗಳ,ಗಲಾಟೆ ಮಾಡಿಕೊಂಡು ಹೊಡೆದಾಡಿದ ಪ್ರಕರಣದಲ್ಲಿ ಎರಡು ಕಡೆಯವರು ಶಿಕಾರಿಪುರ ಆಸ್ಪತ್ರೆಗೆ ಕಳೆದ ಸೆಪ್ಟೆಂಬರ್ 20 ರಂದು ದಾಖಲಾಗಿದ್ದರು. ಅದೇ ಸಂದರ್ಭದಲ್ಲಿ ಊರಿನ ಕೆಲವರು ರಾಜಿ ಮಾಡಿಸಿ ಸಮಸ್ಯೆ ಇತ್ಯರ್ಥ ಪಡಿಸಲು ಬಂದಿದ್ದರು. ಈ ವೇಳೆ ಭರತ್ , ವೀರೇಶ್, ಸೋಮಶೇಖರ್​ ಎಂಬವರು. ಆಸ್ಪತ್ರೆಯಲ್ಲಿ ದಾಖಲಾಗಿದ್ದವರು ಹಾಗೂ ರಾಜಿ ಸಂಧಾನಕ್ಕೆ ಬಂದವರ ಮೇಲೆ ದಾಳಿ ಮಾಡಿದ್ದಾರೆ. ಚಾಕುವಿನಿಂದ ಮೂವರ ಕುತ್ತಿಗೆ ಎದೆಗೆ ಚುಚ್ಚಿದ್ದಾರೆ. ಘಟನೆಯಿಂದಾಗಿ ಆಸ್ಪತ್ರೆಯಲ್ಲಿ ಕೆಲಕಾಲ ಬಿಗುವಿನ ವಾತಾವರಣವೂ ಉಂಟಾಗಿತ್ತು. ಆನಂತರ ಕಿರುಚಾಟ ಕೇಳಿ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಸದ್ಯ ಈ ಪ್ರಕರಣ ಸಂಬಂಧ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸ್ತಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Attempt to murder case Shikaripura, Stabbing incident in hospital, Shikaripura crime news, FIR filed Shivamogga.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor