ಸುದ್ದಿಯ ಸ್ಥಳ: Thirthahalli, Shivamogga, Karnataka
ಮಲೆನಾಡು ಟುಡೆ ಸುದ್ದಿ/ ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮುಕ್ತಿ ಹರಿಹರಪುರ ಸಮೀಪದ ಬಾಳುಗೋಡು ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡುವ ಉದ್ದೇಶದಿಂದ ಸ್ಥಳ ತಪಾಸಣೆಗೆ ತೆರಳಿದ್ದ ಮೆಸ್ಕಾಂಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪಕ್ಕದ ಮನೆಯ ನಿವಾಸಿಯೊಬ್ಬರು ಅಧಿಕಾರಿಯನ್ನು ತಳ್ಳಾಡಿ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ತಮ್ಮ ಮನೆಯ ಸಮೀಪದ ವಿದ್ಯುತ್ ಕಂಬದಿಂದ ಮತ್ತೊಂದು ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿರೋಧ ವ್ಯಕ್ತಪಡಿಸಿದ ವ್ಯಕ್ತಿಯು ಈ ವೇಳೆ ತೀವ್ರ ಗಲಾಟೆ ಎಬ್ಬಿಸಿದ್ದಾನೆ. ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಗಳದ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿವೆ ಎನ್ನಲಾಗಿದೆ.
