ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಿಗೆ ಬರುವ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ನೂತನವಾಗಿ ಆಟೋ ರಿಕ್ಷಾ ಪ್ರೀ-ಪೇಯ್ಡ್ ಕೌಂಟರ್‌ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ಆಟೋ ಸಂಘಗಳ ಜಂಟಿ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.
ಎಂಗೇಜ್ಮೆಂಟ್ಗೆಂದು ಹೋಗಿದ್ದ ತಾಯಿ ಮಗಳು ನಾಪತ್ತೆ

ರೈಲ್ವೆ ನಿಲ್ದಾಣದಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿರುವ ಪ್ರೀ-ಪೇಯ್ಡ್ ಕೌಂಟರ್ ಮಾದರಿಯಲ್ಲೇ ಬಸ್ ನಿಲ್ದಾಣಗಳಲ್ಲೂ ವ್ಯವಸ್ಥೆ ಜಾರಿಗೆ ತರಲಾಗುವುದು. ಜನವರಿ 15 ರ ನಂತರ ಈ ಕೌಂಟರ್‌ಗಳು ಕಾರ್ಯಾರಂಭ ಮಾಡಲಿದ್ದು, ಇದಕ್ಕಾಗಿ ಸ್ಥಳ ಪರಿಶೀಲನೆ ನಡೆಸಿ ಜಾಗ ನಿಗದಿಪಡಿಸಲು ಪೊಲೀಸ್ ಮತ್ತು ಆರ್‌ಟಿಓ ಇಲಾಖೆಗೆ ಸೂಚಿಸಲಾಗಿದೆ. ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸಂಸ್ಥೆಗೆ ಇದರ ಜವಾಬ್ದಾರಿ ನೀಡಲಾಗಿದ್ದು, ಸಾರ್ವಜನಿಕರಿಗೆ ಅರಿವು ಮೂಡಿಸಲು ಜಾಹೀರಾತು ಫಲಕಗಳನ್ನು ಅಳವಡಿಸಲು ನಿರ್ದೇಶನ ನೀಡಲಾಗಿದೆ.
auto Pre paid Counters ಬೆಳಗಿನ ಜಾವ ಮತ್ತು ತಡರಾತ್ರಿಯ ಸಮಯದಲ್ಲಿ ರೈಲು ಹಾಗೂ ಬಸ್‌ಗಳ ಸಂಚಾರ ಹೆಚ್ಚಿರುವುದರಿಂದ, ಆ ಸಮಯದಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಕೌಂಟರ್‌ಗಳಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ಆಟೋ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಗಿ, ಬ್ಯಾಡ್ಜ್ ಹಾಗೂ ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಮತ್ತು ಪ್ರೀ-ಪೇಯ್ಡ್ ವ್ಯವಸ್ಥೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದರು.
ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಆಟೋ ಸಂಘಗಳು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು. ನಿಲ್ದಾಣಗಳ ಒಳಗೆ ಮತ್ತು ಹೊರಗೆ ಧ್ವನಿವರ್ಧಕಗಳ ಮೂಲಕ ಪ್ರೀ-ಪೇಯ್ಡ್ ವ್ಯವಸ್ಥೆಯ ಬಗ್ಗೆ ನಿರಂತರವಾಗಿ ಘೋಷಣೆ ಮಾಡಬೇಕು. ಸಭೆಯಲ್ಲಿ ಎಎಸ್ಪಿ ಕಾರ್ಯಪ್ಪ, ಆರ್‌ಟಿಓ ಅಧೀಕ್ಷಕ ಶಶಿಧರ್, ಸಂಚಾರಿ ಪೊಲೀಸ್ ನಿರೀಕ್ಷಕ ದೇವರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಆಟೋ ಸಂಘಟನೆಯ ಪದಾಧಿಕಾರಿಗಳು ಪಾಲುಗೊಂಡಿದ್ದರು.
auto Pre paid Counters at Bus Stands from Jan 15

