ಉದ್ಯೋಗ  ಹುಡುಕ್ತಿದ್ದೀರಾ, ಹಾಗಾದ್ರೆ ಇಲ್ಲಿದೆ ನೋಡಿ ಈ ದಿನ ನೇರ ಸಂದರ್ಶನ 

ಹಂಚಿಕೊಳ್ಳಿ
WhatsApp Facebook X Telegram
Shivamogga Job ಸಾಂದರ್ಭಿಕ ಚಿತ್ರ
Shivamogga Jobಸಾಂದರ್ಭಿಕ ಚಿತ್ರ

Axis Bank Recruitment ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.06 ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. 

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ಈ ನೇರ ಸಂದರ್ಶನದಲ್ಲಿ ಎಕ್ಸಿಸ್ ಬ್ಯಾಂಕ್ ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ  ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Axis Bank Recruitment Drive in Shimoga

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor