KARNATAKA NEWS/ ONLINE / Malenadu today/ Jun 5, 2023 SHIVAMOGGA NEWS
ಶಿವಮೊಗ್ಗ/ ಆಯನೂರಲ್ಲಿ ಬಾರ್ ಕ್ಯಾಶಿಯರ್ ಕೊಲೆ ಪ್ರಕರಣ ಸಂಬಂಧ ಕುಂಸಿ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ನಿರಂಜನ, ಅಶೋಕ್ ಹಾಗೂ ಸತೀಶ್ ಬಂಧಿತರು . ಈ ಪೈಕಿ ಇಬ್ಬರನ್ನು ಮೊದಲೇ ಬಂಧಿಸಿದ್ದ ಪೊಲೀಸರು, ಸತೀಶ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಎಸ್ಐ ರಾಜುರೆಡ್ಡಿಯವರು ಆರೋಪಿ ಕಾಲಿಗೆ ಗುಂಡು ಹೊಡೆದು ಆತನನ್ನ ಬಂಧಿಸಿದ್ದಾರೆ.
ಹಳೇ ಕಿರಿಕ್! ಆಯನೂರಿನಲ್ಲಿ ನಿನ್ನೆ ರಾತ್ರಿ, ಬಾರ್ ಕ್ಯಾಶಿಯರ್ಗೆ ಚುಚ್ಚಿ ಕೊಲೆ! ಪೊಲೀಸರೇ ಸಾಕ್ಷಿಯಾದರಾ ಭೀಕರ ಘಟನೆಗೆ?
ನಿನ್ನೆ ಮಧ್ಯರಾತ್ರಿ ನಡೆದಿದ್ದ ಕೊಲೆ ಸಂಬಂಧ ಆರೋಪಿ ಸತೀಶ್ನನ್ನ ಬಂಧಿಸಲು ಪಿಎಸ್ಐ ರಾಜುರೆಡ್ಡಿ ಹಾಗೂ ಪ್ರವೀಣ್ ಹಾಗೂ ಶಿವರಾಜ್ ಎಂಬಿಬ್ಬರು ಸಿಬ್ಬಂದಿ ತೆರಳಿದ್ದರು. ಈ ವೇಳೆ ಆರೋಪಿ ಸತೀಶ್ ಪೊಲೀಸರ ಮೇಲೆ ಚಾಕುವಿನಿಂದ ಅಟ್ಯಾಕ್ ಮಾಡಲು ಪ್ರಯತ್ನಿಸಿದ್ದಾನೆ. ಎಚ್ಚರಿಕೆ ನೀಡಿ ಗಾಳಿಯಲ್ಲಿ ಗುಂಡು ಹೊಡೆದ ಹೊರತಾಗಿಯು ಸತೀಶ್ ದಾಳಿಗೆ ಮುಂದಾದಾಗ ಪಿಎಸ್ಐ ರವರು ಆತನ ಕಾಲಿಗೆ ಗುಂಡು ಹಾರಿಸಿದ್ಧಾರೆ. ಘಟನೆಯಲ್ಲಿ ಓರ್ವ ಸಿಬ್ಬಂದಿಗೆ ಗಾಯವಾಗಿದ್ದು, ಅವರನ್ನ ಹಾಗೂ ಆರೋಪಿ ಸತೀಶ್ನನ್ನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
