ರಾಮನ ಹೆಸರಲ್ಲಿ ರಾಜಕೀಯ ಬೇಡ,ಆಯನೂರು ಮಂಜುನಾಥ್​ ಹೀಗಂದಿದ್ಯಾಕೆ

ಹಂಚಿಕೊಳ್ಳಿ
WhatsApp Facebook X Telegram
Ayanur Manjunath Protests Against G Ram G Scheme 
Ayanur Manjunath Protests Against G Ram G Scheme 

ಶಿವಮೊಗ್ಗ : ಕೇಂದ್ರ ಸರ್ಕಾರ  ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MNREGA) ಯೋಜನೆಯನ್ನು ರದ್ದುಪಡಿಸಿ, ಅದರ ಬದಲಾಗಿ ವಿಬಿ-ಜಿ ರಾಮ್ ಜಿ ಎನ್ನುವ ಹೊಸ ಮಸೂದೆಯನ್ನು ಜಾರಿಗೆ ತಂದಿರುವುದಕ್ಕೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ

Ayanur Manjunath Protests Against G Ram G Scheme 
Ayanur Manjunath Protests Against G Ram G Scheme

ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸು ಕೇಂದ್ರ ಸರ್ಕಾರವು ಈ ಮಸೂದೆಗೆ ಧಾರ್ಮಿಕ ಲೇಪನ ಹಚ್ಚುವ ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು. ಮಸೂದೆಯಲ್ಲಿ ಮೂಲತಃ ರಾಮ್ ಎನ್ನುವ ಹೆಸರಿಲ್ಲದಿದ್ದರೂ, ಉದ್ದೇಶಪೂರ್ವಕವಾಗಿ ಧರ್ಮದ ಹೆಸರನ್ನು ಬಳಸಿ ಜನರ ಭಾವನೆಗಳೊಂದಿಗೆ ಆಟವಾಡಲಾಗುತ್ತಿದೆ ಮತ್ತು ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಯೋಜನೆಯಿಂದ ಕೈಬಿಡಲು ಈ ತಂತ್ರ ರೂಪಿಸಲಾಗಿದೆ ಎಂದು ಅವರು ದೂರಿದರು .

ಹೊಸ ಯೋಜನೆಯಿಂದಾಗಿ ಗ್ರಾಮ ಪಂಚಾಯತಿಗಳ ಸ್ವಾಯತ್ತ ಅಧಿಕಾರವನ್ನು ಕಸಿದುಕೊಳ್ಳಲಾಗುತ್ತಿದ್ದು, ಇದು ಗ್ರಾಮೀಣ ನಿರುದ್ಯೋಗಿ ಕಾರ್ಮಿಕರ ಪಾಲಿಗೆ ಮಾರಕವಾಗಿ ಪರಿಣಮಿಸಲಿದೆ ಎಂದು ಆಯನೂರು ಆತಂಕ ವ್ಯಕ್ತಪಡಿಸಿದರು. 

ಈ ಹಿಂದೆ ಮನರೇಗಾ ಯೋಜನೆಯ ಪೂರ್ಣ ವೆಚ್ಚವನ್ನು ಕೇಂದ್ರವೇ ಭರಿಸುತ್ತಿತ್ತು, ಆದರೆ ಈಗ ರಾಜ್ಯ ಸರ್ಕಾರಗಳು ಮತ್ತು ಪಂಚಾಯತಿಗಳ ಮೇಲೆ ಅನಗತ್ಯ ಆರ್ಥಿಕ ಹೊರೆ ಹೇರಲಾಗುತ್ತಿದೆ. ಇದು ಕಾರ್ಮಿಕರ ಕೂಲಿಯಲ್ಲಿ ವಂಚನೆಗೆ ದಾರಿ ಮಾಡಿಕೊಡುವುದಲ್ಲದೆ, ರಾಜ್ಯಗಳ ಹಣಕಾಸಿನ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಈ ವಿವಾದಾತ್ಮಕ ಮಸೂದೆಯನ್ನು ರದ್ದುಗೊಳಿಸಿ, ಹಳೆಯ ಮನರೇಗಾ ಯೋಜನೆಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದ ಅವರು, ರಾಮನ ಹೆಸರನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಂಡು ಜನರನ್ನು ತಪ್ಪು ದಾರಿಗೆ ಎಳೆಯುವುದನ್ನು ನಿಲ್ಲಿಸಬೇಕು ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.

Ayanur Manjunath Protests Against G Ram G Scheme 
Ayanur Manjunath Protests Against G Ram G Scheme

Ayanur Manjunath Protests Against G Ram G Scheme 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor