ಲಾಸ್ಟ್ ಸ್ಟಾಪ್​ನಲ್ಲಿ ಆಯನೂರು ಮಂಜುನಾಥ್! ಕೈ ಹಿಡಿಯುತ್ತಾ ಕಾಂಗ್ರೆಸ್! ಕೆಪಿಸಿಸಿಯಲ್ಲಿಂದು ಪಕ್ಷ ಸೇರ್ಪಡೆ

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS

ವಿರೋಧಗಳ ನಡುವೆ ಇವತ್ತು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್​ ಮುಖಂಡ ಆಯನೂರು ಮಂಜುನಾಥ್​  ಕಾಂಗ್ರೆಸ್‌ ಪಕ್ಷಕ್ಕೆ ಸೇರಲಿದ್ಧಾರೆ. ಈ ಸಂಬಂಧ ನಿನ್ನೆಯೇ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದ  ಆಯನೂರು ಮಂಜುನಾಥ್‌  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಪಕ್ಷದ ಎಲ್ಲ ಮುಖಂಡರು ನನ್ನ ನಿಲುವಿಗೆ ಸಹಮತ ನೀಡಿ, ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದಿದ್ದಾರೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೆ. ಆದರೆ, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಅವಕಾಶ ನೀಡಿತ್ತು. ಜೆಡಿಎಸ್‌ನಲ್ಲಿ ಯಾವುದೇ ಗೊಂದಲ ಇರಲಿಲ್ಲ. ಆದರೆ, ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸೇರುತ್ತಿದ್ದೇನೆ. ಜೆಡಿಎಸ್ ತೊರೆಯುತ್ತಿರುವುದಕ್ಕೆ ಬೇಸರವಿಲ್ಲ. ರಾಜಕಾರಣವೇ ಒಂದು ಅವಕಾಶ, ಕಾಂಗ್ರೆಸ್ ನನ್ನ ಕೊನೆಯ ಬಸ್ ಸ್ಟಾಪ್ ಅಂತ ಕಾಣುತ್ತದೆ. ಬಿಜೆಪಿಯಿಂದ ನನಗೆ ಆಹ್ವಾನ ಬಂದಿಲ್ಲ ಎಂದರು.

ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ. ವಿಧಾನ ಪರಿಷತ್ ಪದವೀಧರರ ಕ್ಷೇತ್ರ ಅಥವಾ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅವಕಾಶ ನೀಡಿದರೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುತ್ತೇನೆ. ನನ್ನೊಂದಿಗೆ ಜೆಡಿಎಸ್‌ಗೆ ಬಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಕೂಡ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸೇರಬಹುದು ಎಂದು ತಿಳಿಸಿದರು.

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು