ಈಶ್ವರಪ್ಪನವರಿಂದ ಮನಸ್ಸಿಗೆ ನೋವಾಗಿದೆ! ಹಾವೇರಿಯಲ್ಲಿ ಸಿಡಿದ ಬಿಸಿ ಪಾಟೀಲ್​! ಕಾರಣವೇನು ಗೊತ್ತಾ?

B C Patil has objected to his son K E Kanthesh being projected as the Haveri candidate ತಮ್ಮ ಪುತ್ರ ಕೆಇ ಕಾಂತೇಶ್​ರನ್ನ ಹಾವೇರಿ ಅಭ್ಯರ್ಥಿ ಎಂದು ಬಿಂಬಿಸುತ್ತಿರುವುದಕ್ಕೆ ಬಿ ಸಿ ಪಾಟೀಲ್​ ಆಕ್ಷೇಪ ವ್ಯಕ್ತಪಡಿಸಿದ್ದಾರೆ

ಈಶ್ವರಪ್ಪನವರಿಂದ ಮನಸ್ಸಿಗೆ ನೋವಾಗಿದೆ!  ಹಾವೇರಿಯಲ್ಲಿ ಸಿಡಿದ ಬಿಸಿ ಪಾಟೀಲ್​! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Aug 23, 2023 SHIVAMOGGA NEWS 

ಶಿವಮೊಗ್ಗ ನಗರ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಜಕೀಯ ನಿವೃತ್ತಿ ತೆಗೆದುಕೊಂಡಿದ್ದ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ (K. S. Eshwarappa) ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮಗನಿಗೆ ಟಿಕೆಟ್ ನೀಡುವಂತೆ ಪ್ರಯತ್ನಿಸುತ್ತಿರುವುದು ಗೊತ್ತಿರುವ ವಿಚಾರ. ಇದೀಗ ಈ ವಿಚಾರದಲ್ಲಿ ಬಾಂಬೆ ಟೀಂನಿಂದಲೇ ಆಕ್ಷೇಪ ವ್ಯಕ್ತವಾಗಿದೆ.  

ಈಶ್ವರಪ್ಪ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರ ಕಾಂತೇಶನನ್ನು ಮುಂದಿನ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ಕಾಂತೇಶ್ ಅವರಿಗೆ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಯಾವುದೇ ಸಂದೇಶ ಕೊಟ್ಟಿಲ್ಲ.  ಹೀಗಿದ್ದರೂ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನಾಗಿ ಮಾಡಿದವರನ್ನು ಕರೆದುಕೊಂಡು ಈಶ್ವರಪ್ಪ ಈ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ಇಲ್ಲಿಯ ವಾತಾವರಣ ಕೆಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಅಲ್ಲದೆ ಹಾವೇರಿ ಲೋಕಸಭಾ ಚುನಾವಣೆಗೆ ನಾನೂ ಸಹ ಆಕಾಂಕ್ಷಿ ಎಂದಿದ್ದಾರೆ.  

ನಿನ್ನೆ ಈ ಸಂಬಂಧ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕಾಂತೇಶ್‌ಗೆ ಪಕ್ಷ ಸೂಚನೆ ಕೊಟ್ಟಿದ್ದರೆ ಕ್ಷೇತ್ರದಲ್ಲಿ ಓಡಾಡಲಿ, ಆದರೆ, ಅಂತಹ ಯಾವುದೇ ಸಂದೇಶ ಪಕ್ಷದಿಂದ ಬಂದಿಲ್ಲ. ಈಶ್ವರಪ್ಪ ಕೂಡ ತಮ್ಮ ಪುತ್ರನೇ ಅಭ್ಯರ್ಥಿ ಎನ್ನುವ ರೀತಿಯಲ್ಲಿ ಓಡಾಡುವುದು ಸರಿಯಲ್ಲ, ಈ ರೀತಿ ಮಾಡಿದರೆ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತದೆ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದಲ್ಲಿ ಬಹಳಷ್ಟು ಆಕಾಂಕ್ಷಿಗಳಿದ್ದಾರೆ. ಚುನಾವಣೆ ಎದುರಿಸುವ ಶಕ್ತಿ, ಸಾಮರ್ಥ್ಯ ಇರುವವರೂ ಕೂಡ ಬಹಳಷ್ಟು ಮಂದಿ ಇದ್ದಾರೆ. ಪಕ್ಷ ಅವಕಾಶ ಕೊಟ್ಟರೆ ನಾನೂ ಸ್ಪರ್ಧೆಗೆ ಆಸಕ್ತಿ ಹೊಂದಿದ್ದೇನೆ ಎಂದಿದ್ದಾರೆ. 

 

ಈಶ್ವರಪ್ಪನವರು ನಾವು ಬ೦ದಿದ್ದರಿಂದ ಅಶಿಸ್ತು ಮೂಡಿದೆ ಎಂದಿದ್ದಾರೆ. ಈಶ್ವರಪ್ಪ ಅವರ ಹೇಳಿಕೆಯಿಂದ ನಮ್ಮ ಮನಸ್ಸಿಗೆ ನೋವಾಗಿದೆ. ಪಕ್ಷದ ವರಿಷ್ಠರಾದರೂ ಈಶ್ವರಪ್ಪಅವರಿಗೆ ಬಗ್ಗೆ ಬುದ್ದಿಮಾತು ಹೇಳಬಹುದಿತ್ತು. ಆದರೆ, ಯಾರೂ ಕಿವಿ ಮಾತು ಹೇಳಲಿಲ್ಲ, ಅದೂ ಕೂಡ ನಮಗೆ ಬಹಳಷ್ಟು ಬೇಸರ ಎಂದರು.  ಮನೆಗೆ ಬ೦ದು ಸೊಸೆ ಮೊಳೆ ಬಡಿದ ಮೇಲೆ ಮನೆಯವಳಾಗುತ್ತಾಳೆಯೇ ಹೊರಗಿನವಳಾಗಲ್ಲ, ನಾವು ಬಿಜೆಪಿ ಸದಸ್ಯತ್ವ ಪಡೆದ ಮೇಲೆ ವಲಸಿಗರು, ಮೂಲ ಎಂದು ಹೇಳುವ ಪ್ರಶ್ನೆಯೇ ಇಲ್ಲ. 2004ರ ನಂತರ ಹೊರಗಿನಿಂದ ಬಂದವರೇ ಬಿಜೆಪಿಯಲ್ಲಿ ಜಾಸ್ತಿ ಇದ್ದಾರೆ. ಅನಂತ್ ಕುಮಾರ್, ಯಡಿಯೂರಪ್ಪ ಅವರಂತಹ ಕೆಲ ನಾಯಕರನ್ನು ಬಿಟ್ಟರೆ ಉಳಿದ ಬಹಳಷ್ಟು ಜನ ಜನತಾದಳದಿಂದ  ಬಂದವರಿದ್ದಾರೆ. ನಾವು ಬಂದು 4 ವರ್ಷ ಆಯಿತು. ನಾವೀಗ ವಲಸಿಗರಲ್ಲ ಎಂದಿದ್ದಾರೆ.   

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು