Bakery Products Training in Keladi Shivappa Nayaka University ಮಲೆನಾಡು ಟುಡೆ ನ್ಯೂಸ್, ಆಗಸ್ಟ್ 25, 2025, ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು, ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ. ಈ ತರಬೇತಿಯು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 30 ರವರೆಗೆ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ಬೇಕರಿ ಘಟಕದಲ್ಲಿ ನಡೆಯಲಿದೆ.
ಈ ತರಬೇತಿಯಲ್ಲಿ ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕೀಸ್, ಮಸಾಲ ಬಿಸ್ಕತ್ತು, ಫ್ರೂಟ್ ಕೇಕ್, ಸ್ಪಾಂಜ್‌ಕೇಕ್, ಬಟರ್ ಐಸಿಂಗ್, ಮಿಲ್ಕ್ ಬ್ರೆಡ್, ಪಫ್ ಪೇಸ್ಟ್ರಿ, ದಿಲ್‌ಪಸಂದ್, ಬಾಂಬೆ ಖಾರ ಸೇರಿದಂತೆ ಹಲವು ಬಗೆಯ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಕಲಿಸಲಾಗುತ್ತದೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ₹4500 ಶುಲ್ಕ ಪಾವತಿಸಬೇಕು. ಆಗಸ್ಟ್ 30ರೊಳಗಾಗಿ ದೂರವಾಣಿ ಮೂಲಕ ಅಥವಾ ನೇರವಾಗಿ ಕೃಷಿ ಮಹಾವಿದ್ಯಾಲಯದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಡಾ. ಜಯಶ್ರೀ ಎಸ್. (9449187763) ಮತ್ತು ಜಯಶಂಕರ್ (9686555897) ಅವರನ್ನು ಸಂಪರ್ಕಿಸಬಹುದು ಎಂದು ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೊಫೆಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Bakery Products Training in Keladi Shivappa Nayaka University
