bakrid festival : ಬಕ್ರೀದ್ ಹಬ್ಬದ ಪ್ರಯುಕ್ತ ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ
ಮುಸ್ಲಿಂ ಸಮುದಾಯ ಇಂದು ದೇಶದಾದ್ಯಂತ ಸಂಭ್ರಮ ಸಡಗರದಿಂದ ಬಕ್ರೀದ್ ಹಬ್ಬವನ್ನು ಆಚರಿಸುತ್ತಿದ್ದಾರೆ. ಹಾಗೆಯೇ ಮಸೀದಿ ಸೇರಿದಂತೆ ಇನ್ನಿತರೇ ಪವಿತ್ರ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನ ಸಲ್ಲಿಸಿದ್ದಾರೆ.
ಅದರಂತೆ ಇಂದು ಬೆಳಿಗ್ಗೆ ಶಿವಮೊಗ್ಗದ ಈದ್ಗಾ ಮೈದಾನದಲ್ಲಿ ಮುಸಲ್ಮಾನರು ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು. ಒಬ್ಬರನ್ನೊಬ್ಬರು ತಬ್ಬಿಕೊಂಡು ಪರಸ್ಪರ ಶುಭಾಶಯವನ್ನು ಕೋರಿದರು. ಈ ಸಂದರ್ಭದಲ್ಲಿ ಮೈದಾನದಲ್ಲಿ ಸಾವಿರಾರು ಮುಸಲ್ಮಾನರು ಭಾಗಿಯಾಗಿದ್ದು, ಮನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ನಗರದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ರಂಜಾನ್ ನಂತರ ಬಕ್ರೀದ್ ಮುಸಲ್ಮಾನರಿಗೆ ಪವಿತ್ರ ಹಬ್ಬವಾಗಿದ್ದು, ಇದು ತ್ಯಾಗ ಬಲಿದಾನದ ಸಂಕೇತವಾಗಿದೆ.
