STATE NEWS

ಬಾಳೆಬರೇ ಘಾಟಿಯಲ್ಲಿ ಶ್ರೀ ದುರ್ಗಾಂಬ ಬಸ್‌ನಲ್ಲಿ ಬೆಂಕಿ ಅವಘಡ, ಪ್ರಯಾಣಿಕರು ಸೇಫ್​​

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಬಾಳೆಬರೇ ಘಾಟಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Balebare Ghat ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮಳೆಯ ಶುಭಾರಂಭ! ನಿನ್ನೆ ಹೇಗಿತ್ತು ವರ್ಷದಾರೆ! ವಿವರ ಓದಿ

ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಶ್ರೀ ದುರ್ಗಾಂಬ ಬಸ್ ಶಿವಮೊಗ್ಗ ಮಾರ್ಗವಾಗಿ ಘಾಟಿ ಇಳಿದು ಕುಂದಾಪುರದ ಕಡೆಗೆ ಪ್ರಯಾಣ ಬೆಳೆಸುತ್ತಿತ್ತು. ಈ ಸಂದರ್ಭದಲ್ಲಿ ಏಕಾಏಕಿ ಬಸ್‌ನಲ್ಲಿ  ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಹೊರಗೆ ಓಡಿಬಂದಿದ್ದಾರೆ. ಅದೃಷ್ಟವಶಾತ್, ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅಗ್ನಿ ಅವಘಡದಲ್ಲಿ ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದ್ದು,

ಬೆಂಕಿಯ ಜ್ವಾಲೆಗೆ ಬಸ್ ಬಹುತೇಕ ಸುಟ್ಟು ಕರಕಲಾಗಿದ್ದು, ಘಾಟಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. 

Balebare Ghat Durgamba Bus Catches Fire

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.