ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಅನ್ವಯಿಸಿ ಮಹತ್ವದ ಆದೇಶವೊಂದನ್ನು ಹೊಡೆಸಿದೆ. ಈ ಶಾಲೆಗಳಲ್ಲಿ ನಡೆಯುವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಅಂದರೆ ಬ್ಯಾನ್ ಮಾಡಿ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ (ಪ್ರಾಥಮಿಕ ಶಿಕ್ಷಣ) ನಿರ್ದೇಶಕರು ಏಪ್ರಿಲ್ 16 ರಂದೆ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದು, ನಿಯಮ ಉಲ್ಲಂಘಿಸಿದರೆ ಶಾಲಾ ಮುಖ್ಯಸ್ಥರು ಹಾಗೂ ಆಡಳಿತ ಮಂಡಳಿಯ ಮೇಲೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಶಾಲೆಯು ಮಕ್ಕಳಿಗೆ ಜ್ಞಾನ ದೇಗುಲವಿದ್ದಂತೆ. ಮಗುವಿನ ಭವಿಷ್ಯದ ನಿರ್ಮಾಣ, ಸಂಸ್ಕಾರ, ವಿನಯತೆ, ಒಳ್ಳೆಯ ನಡತೆ, ಮಾನಸಿಕ ಸ್ಥಿತಿ ಮತ್ತು ನೈತಿಕ ಮೌಲ್ಯಗಳ ಬೆಳವಣಿಗೆಯು ಶಾಲೆಯಿಂದಲೇ ಪ್ರಾರಂಭವಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಅಶ್ಲೀಲ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರಲಿದ್ದು, ಶಿಕ್ಷಣದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಲಿದೆ.
ಶಾಲಾ ಶಿಕ್ಷಣ ಇಲಾಖೆಯ (ಪ್ರಾಥಮಿಕ ಶಿಕ್ಷಣ) ನಿರ್ದೇಶಕರು
ಮಕ್ಕಳಿಗೆ ಸ್ಫೂರ್ತಿದಾಯಕ, ಸಕಾರಾತ್ಮಕ, ರಾಷ್ಟ್ರಾಭಿಮಾನ ಮೂಡಿಸುವ ಹಾಗೂ ಕನ್ನಡ ನಾಡಿನ ಹಿರಿಮೆ, ಗರಿಮೆ ಮತ್ತು ನೈತಿಕತೆ ಸಾರುವ ಹಾಡುಗಳನ್ನು ಮಾತ್ರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಯ್ಕೆ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವಂತಹ ಗೀತೆಗಳನ್ನು ಮಾತ್ರ ಬಳಸಬೇಕು. ಹಾಡುಗಳ ಮತ್ತು ನೃತ್ಯಗಳ ಆಯ್ಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಯು ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸಬೇಕು. ಜೊತೆಗೆ, ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಭ್ಯ ಉಡುಪುಗಳನ್ನು ಧರಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ.
ಈ ಸಂಬಂಧ ಆಯುಕ್ತರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರತಿ ಇಲ್ಲಿದೆ ಗಮನಿಸಿ

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.