Bangalore | ಸಿದ್ದರಾಮಯ್ಯರ ಪರವಾಗಿ ಸುದ್ದಿಗೋಷ್ಟಿ ನಡೆಸ್ತಿದ್ದ ವೇಳೆ ಹೃದಯಾಘಾತದಿಂದ ಕಾಂಗ್ರೆಸ್‌ ಕಾರ್ಯಕರ್ತ ಸಾವು

13

SHIVAMOGGA | MALENADUTODAY NEWS | Aug 20, 2024  

ಪ್ರೆಸ್‌ ಮೀಟ್‌ ನಡೆಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಬೆಂಗಳೂರು ಸಾಕ್ಷಿಯಾಗಿದೆ . ಈ ಘಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ. 

- Advertisement -

ಮುಡಾ ಪ್ರಕರಣದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತ ಸಿ.ಕೆ.ರವಿಚಂದ್ರನ್‌ ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸ್ತಿದ್ದರು. ಮೈಕ್‌ ಹಿಡಿದು ಮಾತನಾಡುತ್ತಿದ್ದ ಅವರು ಇದ್ದಕ್ಕಿದ್ದಂತೆ ಕುರ್ಚಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ಆ ಬಳಿಕ ಮೂಗಿನಿಂದ ರಕ್ತ ಬಂದಿದೆ. ಪ್ರಜ್ಞೆ ತಪ್ಪಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.  



ಇನ್ನಷ್ಟು ಸುದ್ದಿಗಳು

Share This Article