ಶಿವಮೊಗ್ಗದಲ್ಲಿ ಬೀದಿಗಿಳಿದು ವಕೀಲರ ಪ್ರತಿಭಟನೆ! ಕಾರಣವೇನು ಗೊತ್ತಾ?

The Bar Association in Shivamogga staged a protest against the police attack on a lawyer in Chikkamagaluru district

ಶಿವಮೊಗ್ಗದಲ್ಲಿ ಬೀದಿಗಿಳಿದು ವಕೀಲರ ಪ್ರತಿಭಟನೆ! ಕಾರಣವೇನು ಗೊತ್ತಾ?

SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS 

SHIVAMOGGA |  ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗ ವಕೀಲರ ಸಂಘದ ನೇತೃತ್ವದಲ್ಲಿ ನೂರಾರು ವಕೀಲರ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.. 

ಶಿವಮೊಗ್ಗ ಕೋರ್ಟ್ 

ಶಿವಮೊಗ್ಗ ಕೋರ್ಟ್ ಆವರಣದಿಂದ ಪ್ರತಿಭಟನೆ ನಡೆಸಿದ ವಕೀಲರು ಮೆರವಣಿಗೆ ಹೊರಟು ಬಾಲರಾಜ ಅರಸ್ ರಸ್ತೆ, ಸೀನಪ್ಪ ಶೆಟ್ಟಿ ವೃತ್ತ, ಅಮೀರ್ ಅಹ್ಮದ್ ವೃತದವರೆಗೆ ಹೋಗಿ ವಾಪಸ್ ಶೀನಪ್ಪ ಶೆಟ್ಟಿ ವೃತ್ತಕ್ಕೆ (ಗೋಪಿ ಸರ್ಕಲ್​ಗೆ) ಬಂದು ಸಭೆ ನಡೆಸಿದ್ರು. 

READ : ಸೀದಾ ಮನೆಗೆ ನುಗ್ಗಿದ ಕಾರು! ರಾಷ್ಟ್ರೀಯ ಹೆದ್ದಾರಿಯಲ್ಲಿ ಧರ್ಮಸ್ಥಳಕ್ಕೆ ಹೋಗ್ತಿರುವಾಗ ಘಟನೆ

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರ ಲಾಠಿ ಏಟು

ಚಿಕ್ಕಮಗಳೂರಿನಲ್ಲಿ ನಿನ್ನೆ ವಕೀಲರ ಸಂಘದ ಸದಸ್ಯ ಪ್ರೀತಂ ಹೆಲೈಟ್ ಧರಿಸಿಲ್ಲ ಎಂಬ ಕಾರಣಕ್ಕೆ ಚಿಕ್ಕಮಗಳೂರು ನಗರ  ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಪ್ರೀತಂ ಅವರನ್ನು ಠಾಣೆಗೆ ಎಳೆದುಕೊಂಡು ಹೋಗಿ ಲಾಠಿ, ದೊಣ್ಣೆಯಿಂದ ಥಳಿಸಿ, ತೂ ಕಾಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. 

ಈ ಸಂಬಂಧ ಚಿಕ್ಕಮಗಳೂರು ಎಸ್​ಪಿ ವಿಕ್ರಂ ಅಮಟೆ ರವರು ಪೊಲೀಸರ ವಿರುದ್ಧ ಕ್ರಮ ಕೈಗೊಂಡು , ಪ್ರಕರಣದ ಕುರಿತಾಗಿ ಕೇಸ್ ದಾಖಲಿಸಿದ್ದಾರೆ. ಇವರನ್ನ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿವಿದೆಡೆ ವಕೀಲರು ಪ್ರತಿಭಟನೆ ನಡೆಸ್ತಿದ್ದಾರೆ. 

ಇನ್ನೂ ಶಿವಮೊಗ್ಗದ ಗೋಪಿಸರ್ಕಲ್​ ನಲ್ಲಿ ನಡೆದ ಪ್ರತಿಭಟನೆಯಲ್ಲಿ  ಸ್ಥಳದಲ್ಲಿಯೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಮನವಿ ಸ್ವೀಕರಿಸಬೇಕು ಎಂದು ವಕೀಲರು ಪಟ್ಟು ಹಿಡಿದಿದ್ದರು. ಈ ಸಂಬಂಧ ಕೆಲಹೊತ್ತು ಮಾತುಕತೆಗಳು ಸಹ ನಡೆದವು ಬಳಿಕ ವಕೀಲರ ಮನವಿಯನ್ನು ನೇರವಾಗಿ ಸ್ಥಳಕ್ಕೆ ಬಂದು ಎಸ್​ಪಿ ಮಿಥುನ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಡಾ.ಆರ್​ ಸೆಲ್ವಮಣಿಯವರು ಸ್ವೀಕರಿಸಿದರು. 

READ : ಬ್ಯಾಂಕ್ ಮ್ಯಾನೇಜರೇ ಕಳ್ಳ! ಬ್ರಾಂಚ್​ ಆಫೀಸ್​ನಲ್ಲಿದ್ದ 140 ಪ್ಯಾಕೇಟ್​ ಚಿನ್ನ ಮಾಯ! ಮತ್ತೊಂದು ನಕಲಿ ಗೋಲ್ಡ್ ಕೇಸ್

ಶಿವಮೊಗ್ಗ ತಾಲ್ಲೂಕು  ಪಿಳ್ಳಂಗೇರಿ ಗ್ರಾಮದಲ್ಲಿ ದೇವರ ಕಟ್ಟೆಗೆ ಕಾರು ಡಿಕ್ಕಿ 

ಶಿವಮೊಗ್ಗದ ಹೊಳೆಹೊನ್ನೂರು ಸಮೀಪ ಕಾರೊಂದು ಅಫಘಾತಕ್ಕೀಡಾಗಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಮೂವರಿಗೆ ಗಾಯವಾದ ಬಗ್ಗೆ ವರದಿಯಾಗಿದೆ. 

ಶಿವಮೊಗ್ಗ ತಾಲ್ಲೂಕು  ಪಿಳ್ಳಂಗೇರಿ ಗ್ರಾಮ 

ಇಲ್ಲಿ ಹೆದ್ದಾರಿ ಸಮೀಪದಲ್ಲಿಯೇ ಇರುವ ಗಣಪತಿ ದೇವಸ್ಥಾನದ ಕಟ್ಟ್ಗೆ ಕಾರು ಡಿಕ್ಕಿಯಾಗಿದೆ. ಶಿವಮೊಗ್ಗದಲ್ಲಿ ಯಾವುದೋ ಕೆಲಸದ ನಿಮಿತ್ತ ಬಂದವರು ವಾಪಸ್​ ಹೊರಟಿದ್ದರು.  ಕಾರಿನಲ್ಲಿದ್ದವರು ಚನ್ನಗಿರಿಯ ಅರಿಶಿನಘಟ್ಟಕ್ಕೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಈ ಘಟನೆ ಸಂಭವಿಸಿದೆ. ಪಿಳ್ಳಂಗೇರಿ ಗ್ರಾಮದ ಸಮೀಪ ಚಾಲಕ ನಿಯಂತ್ರಣ ತಪ್ಪಿ, ಕಾರು ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆಡಿದೆ. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ. ಸದ್ಯ ಘಟನೆ ಸಂಬಂಧ ಪೊಲೀಸರು ಪ್ರಕರಣ ನಮೂದಿಸಿಕೊಂಡಿದ್ಧಾರೆ. ಇನ್ನೂ ಘಟನೆ ವೇಳೆ ಗಣಪತಿ ದೇವಸ್ಥಾನದ ಕಟ್ಟೆ ಮೇಲೆ ಯಾರು ಕೂತಿರಲಿಲ್ಲ. ಹೀಗಾಗಿ ಹೆಚ್ಚಿನ ಅಪಾಯವಾಗಲಿಲ್ಲ ಎನ್ನುತ್ತಾರೆ ಸ್ತಳೀಯರು.  



READ : ಸೀದಾ ಮನೆಗೆ ನುಗ್ಗಿದ ಕಾರು! ರಾಷ್ಟ್ರೀಯ ಹೆದ್ದಾರಿಯಲ್ಲಿ ಧರ್ಮಸ್ಥಳಕ್ಕೆ ಹೋಗ್ತಿರುವಾಗ ಘಟನೆ