ರಿಪ್ಪನ್‌ಪೇಟೆಯಲ್ಲಿ ಹೆಜ್ಜೇನುಗಳ ದಾಳಿ : ಬ್ಯಾಂಕ್ ಉದ್ಯೋಗಿ ಸಹಿತ ಹಲವು ವಿದ್ಯಾರ್ಥಿಗಳಿಗೆ ಗಾಯ

ರಿಪ್ಪನ್​ ಪೇಟೆ :  ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಹೆಜ್ಜೇನುಗಳ ಭೀಕರ ದಾಳಿಗೆ ಒಳಗಾಗಿದ್ದಾರೆ. ನಿನ್ನೆ ಬೆಳಿಗ್ಗೆ ಸುಮಾರು 9:30ರ ಸುಮಾರಿಗೆ ಎಸ್‌ಬಿಐ ಬ್ಯಾಂಕ್ ಸಮೀಪ ಸಂಭವಿಸಿದ ಈ ಅನಿರೀಕ್ಷಿತ ಘಟನೆಯಿಂದಾಗಿ ತಡವಾಗಿ ಬೆಳಕಿಗೆ ಬಂದಿದೆ.

ಶಿವಮೊಗ್ಗ: ಈದ್ಗಾ ಮೈದಾನದ ಪಾರ್ಕಿಂಗ್ ವಿಚಾರ; ಪಾಲಿಕೆ ಕ್ರಮಕ್ಕೆ ಹಿಂದೂ ಪರ ಸಂಘಟನೆಗಳ ಆಕ್ಷೇಪ

ಈ ಘಟನೆಯಲ್ಲಿ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ತೌಸಿಫ್ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಹೆಜ್ಜೇನುಗಳು ಅವರನ್ನು ಕಚ್ಚಿದ್ದರಿಂದ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. 

ಶಾಲಾ-ಕಾಲೇಜು ವಿದ್ಯಾರ್ಥಿಗಳೂ ಈ ದಾಳಿಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ವಿಶೇಷವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಾಲ್ ಟಿಕೆಟ್ ಪಡೆಯಲು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ಮಾಡಿವೆ. ಸರ್ಕಾರಿ ಶಾಲೆಯ ಬಾಲಕ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ದಾಳಿಯಲ್ಲಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಉಪಚರಿಸಲಾಗಿದೆ.

Bee Attack in Riponpet Students Injured

Shivamogga Sharavathi Project Sagara PoliceShimoga Court Shivamogga Careers Ripponpete Shivamogga Unknown Body Found Near Tuppur Hybrid Vegetable Seeds Shikaripura Laborer Dies Shivamogga Court Bhadravati Court Unidentified Man Soraba Ghana Detains Bhadravathi Arson Anandapura Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
Bee Attack