SHIVAMOGGA NEWS TODAY

ನವೆಂಬರ್ ಕ್ರಾಂತಿ ಬಗ್ಗ್ಗೆ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದ್ದೇನು

Prathapa thirthahalli ನವೀಕರಣ: 02 ನವೆಂ 2025, 3:39 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Belur Gopalakrishna : ಶಿವಮೊಗ್ಗ: ಬಿಹಾರ ವಿಧಾನಸಭಾ ಚುನಾವಣೆ ಮುಗಿದ ನಂತರ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ, ರಾಜಕೀಯ ವಲಯದಲ್ಲಿ ನಡೆಯುತ್ತಿರುವ ನವೆಂಬರ್ ಕ್ರಾಂತಿಯನ್ನು ಶಾಂತಿಯುತವಾಗಿ ಬಗೆಹರಿಸಲಿದ್ದಾರೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ  ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್‌ರಚನೆ ಯಾವುದೇ ನಿರ್ಧಾರವಿರಲಿ, ಹೈಕಮಾಂಡ್‌ನ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು. ರಾಜ್ಯದ ನಾಯಕರ ನಡುವೆ ಮುಖ್ಯಮಂತ್ರಿ ವಿಚಾರವಾಗಿ ಏನು ಒಪ್ಪಂದ ಆಗಿದೆ ಎಂಬುದು ನನಗೆ ತಿಳಿದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ದಲಿತ ನಾಯಕ ಅಥವಾ ಹಿಂದುಳಿದ ವರ್ಗದ ನಾಯಕರ ಆಯ್ಕೆ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿರುತ್ತವೆ. ಅನುಭವಿ  ರಾಜಕಾರಣಿಗಳು ಸಿಎಂ ಸ್ಥಾನಕ್ಕೆ ಅಪೇಕ್ಷೆ ಪಡುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಏನೇ ಇದ್ದರೂ ಹೈಕಮಾಂಡ್​ ತೀರ್ಮಾನವೇ ಅಂತಿಮ ನಿರ್ಧಾರವಾಗಿರುತ್ತದೆ, ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ತಾವು ಸಚಿವ ಸ್ಥಾನದ ಆಕಾಂಕ್ಷಿ ಎಂದ ಶಾಸಕರು, ನಾನು ಇತ್ತೀಚೆಗೆ ದೆಹಲಿಗೆ ಹೋಗಿ ಬಂದಿದ್ದೇನೆ. ವರಿಷ್ಠರ ಬಳಿ ನನಗೂ ಮಂತ್ರಿಯಾಗುವ ಬಯಕೆ ಇದೆ ಎಂದು ಹೇಳಿದ್ದೇನೆ. ನಾನು ಸಹ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ನನಗೂ ಸಚಿವ ಸ್ಥಾನದ ಬಯಕೆ ಇದೆ. ಇದನ್ನು ನಿರ್ಧರಿಸುವುದು ಸಂಪೂರ್ಣವಾಗಿ ಹೈಕಮಾಂಡ್‌ಗೆ ಬಿಟ್ಟ ವಿಷಯ, ಎಂದು ತಿಳಿಸಿದರು.

Belur Gopalakrishna

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.