Belur Gopalakrishna ಶಿವಮೊಗ್ಗ: ರಾಜ್ಯದಲ್ಲಿ ನೂತನ 20 ಸಚಿವರ ಪಟ್ಟಿ ಬಿಡುಗಡೆಯಾಗಿದ್ದೇ ತಡ, ರಾಜ್ಯದಾದ್ಯಂತ ಸಚಿವ ಸ್ಥಾನ ಸಿಗದ ಶಾಸಕರ ಅಭಿಮಾನಿಗಳು ಪ್ರತಿಭಟನೆ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ಶಿವಮೊಗ್ಗ ; 27 ವರ್ಷದ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ, ಸಂತ್ರಸ್ತೆಗೆ 2 ಲಕ್ಷ ಪರಿಹಾರ, ಏನಿದು ಸುದ್ದಿ
ಅತ್ತ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಶಾಸಕ ತನ್ವೀರ್ ಸೇಠ್ರವರ ಅಭಿಮಾನಿಯೊಬ್ಬ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇದರ ನಡುವೆ ಶಿವಮೊಗ್ಗ ಜಿಲ್ಲೆಯೂ ಸಹ ಇದರಿಂದ ಹೊರತಾಗಿಲ್ಲ. ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಇದೀಗ ನಿರಾಶೆಯುಂಟಾಗಿದ್ದು, ಟೈರ್ ಸುಟ್ಟು ಪ್ರತಿಭಟನೆ ನಡೆಸಿದ್ದಾರೆ.
ಸಾಗರದ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನೆರೆದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ರಸ್ತೆಯಲ್ಲೇ ಟೈರ್ ಗೆ ಬೆಂಕಿ ಹಚ್ಚಿ, ಹೈಕಮಾಂಡ್ ವಿರುದ್ಧ ಹಾಗೆಯೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು. ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಲೇಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಲು ಕ್ರಮ ಕೈಗೊಂಡರು.
