ಸಿಗಂದೂರು ಹಸಿರುಮಕ್ಕಿ ಸೇತುವೆ ಕಾಮಗಾರಿ | ಸಚಿವ ಸತೀಶ್ ಜಾರಕಿಹೊಳಿ ಜೊತೆ ಬೇಳೂರು ಗೋಪಾಲಕೃಷ್ಣರ ಮಾತುಕತೆ | ಏನು ವಿಚಾರ

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 14, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತುಮರಿ ಭಾಗದ ಶರಾವತಿ ಹಿನ್ನೀರಿನಲ್ಲಿ  ನಿರ್ಮಾಣವಾಗುತ್ತಿರುವ ಸಿಗಂದೂರು ಹಾಗೂ ಹಸಿರುಮಕ್ಕಿ ಸೇತುವೆ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವರಿಗೆ ಮನವಿ ಮಾಡಿದ್ದಾರೆ 

ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸಿಗಂದೂರು ಮತ್ತು ಹಸಿರುಮಕ್ಕಿಯ ಸೇತುವೆ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಬೆಂಗಳೂರಿನಲ್ಲಿ ಶುಕ್ರವಾರ ಭೇಟಿ ಮಾಡಿ ಮಾತನಾಡಿ, ತ್ವರಿತವಾಗಿ ಸೇತುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ 

ಈ ವೇಳೆ ಮಾತನಾಡಿದ ಅವರು, ಈ ಸೇತುವೆಗಳು ಹಿನ್ನೀರ ಮುಳುಗಡೆ ಭಾಗದ ಜನರ ಸಂಪರ್ಕ ಕೊಂಡಿ, ಬದುಕಿನ ಜೀವನಾಡಿ. ಸಿಗಂದೂರು ಸೇತುವೆ ಮತ್ತು ಹಸಿರುಮಕ್ಕಿ ಸೇತುವೆ ಕಾಮಗಾರಿ ಸ್ಥಳಕ್ಕೆ ಆಗಮಿಸಿ ಕೆಲಸ ವೀಕ್ಷಿಸಿ ಸಾಧ್ಯವಾದಷ್ಟು ಬೇಗ ಇವುಗಳನ್ನು ಪೂರ್ತಿಗೊಳಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಕೋರಿದ್ದಾರೆ  


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor