Belur Gopalakrishna Statement ಬಿಜೆಪಿ ರಾಜ್ಯ ಘಟಕದಲ್ಲಿ ಆರ್. ಅಶೋಕ್ ಅವರಿಂದ ಹಿಡಿದು ಇನ್ನೂ ಬಹಳಷ್ಟು ನಾಯಕರಿಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ಪಕ್ಷದ ಪ್ರಮುಖ ಸ್ಥಾನಗಳಿಂದ ದೂರವಿಡಬೇಕು ಎಂಬ ಭಾವನೆ ಬಲವಾಗಿದ್ದು, ಮುಮದಿನ ಮೂರು ತಿಂಗಳಲ್ಲಿ ಬಿಜೆಪಿಯಲ್ಲಿ ಕ್ರಾಂತಿ ಆಗಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ 3ತಿಂಗಳೊಳಗೆ ಬಿಜೆಪಿಯಲ್ಲಿ ರಾಜಕೀಯ ಕ್ರಾಂತಿ ನಡೆಯಲಿದೆ ಯಡಿಯೂರಪ್ಪ ಮತ್ತು ಅವರ ಮಕ್ಕಳು ಪಕ್ಷದ ನಾಯಕತ್ವದಿಂದ ದೂರವಾಗಬೇಕು ಎಂಬ ಆಶಯವನ್ನು ರಾಜ್ಯದ ಅನೇಕ ನಾಯಕರು ಹೊಂದಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಪ್ರಹ್ಲಾದ್ ಜೋಷಿ ಸೇರಿದಂತೆ ರಾಜ್ಯಮಟ್ಟದ ಅನೇಕ ನಾಯಕರ ಆಸೆ ಇದೇ ಆಗಿದೆ. ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬಾರದು ಎಂಬ ಅಪೇಕ್ಷೆ ಬಹಳಷ್ಟು ನಾಯಕರಲ್ಲಿ ಮನೆ ಮಾಡಿದೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.
- Advertisement -