SHIVAMOGGA NEWS TODAY

ಅಧೀಕ್ಷಕರಿಂದಲೇ ಲಂಚ ಕೇಳಿದ್ದ ಬಿಇಓ! ₹1 ಲಕ್ಷ ಲಂಚ ತಗೊಬೇಕಾದ್ರೆ ಟ್ರ್ಯಾಪ್! ಆಗಿದ್ದೇಗೆ ಓದಿ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಶಿವಮೊಗ್ಗ ಲೋಕಾಯುಕ್ತ ಪೊಲೀಸರು ನಿನ್ನೆ ದಿನ ದೊಡ್ಡ ಬೇಟೆಯನ್ನೆ ಮಾಡಿದ್ದಾರೆ. ಭದ್ರಾವತಿ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಲಂಚ ಪಡೆಯುತ್ತಿದ್ದಾಗ, ಅವರನ್ನು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ  ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. 

Bhadravathi BEO Nagendrappa Caught by Shivamogga Lokayukta ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ 1,00,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಿ.ಇ.ಓ ನಾಗೇಂದ್ರಪ್ಪ.
Bhadravathi BEO Nagendrappa Caught by Shivamogga Lokayukta ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ 1,00,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಿ.ಇ.ಓ ನಾಗೇಂದ್ರಪ್ಪ.

ಶಿವಮೊಗ್ಗದಲ್ಲಿ ಹುಲಿ ಚರ್ಮದ ಚರ್ಚೆ ತಾರಕಕ್ಕೆ!? ಏನಿದು ವಿನಯ್ ಗುರೂಜಿ ವಿಚಾರ!?

ಪ್ರಕರಣದ ಪೂರ್ತಿ ವಿವರ

ಭದ್ರಾವತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ (ಬಿ.ಇ.ಓ) ನಾಗೇಂದ್ರಪ್ಪ.ಎ.ಕೆ ಮತ್ತು ಅವರ ಮಧ್ಯವರ್ತಿ ಮಂಜುನಾಥ ಲೋಕಾಯುಕ್ತ ಟ್ರ್ಯಾಪ್ ಆದವರು.ಈ ಇಬ್ಬರು 1,00,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ

ಅಂದಹಾಗೆ, ಈ ಲಂಚದ ಪ್ರಕರಣದಲ್ಲಿ ಭದ್ರಾವತಿ ಬಿ.ಇ.ಓ ಕಛೇರಿಯಲ್ಲಿ ಕಛೇರಿ ಅಧೀಕ್ಷಕರಾಗಿ ಕೆಲಸ ಮಾಡುತ್ತಿರುವ ಲಿಂಗರಾಜು ಎಂಬುವವರು ಈ ಬಗ್ಗೆ ದೂರು ನೀಡಿದ್ದರು. 2011 ರಿಂದ 2023 ನೇ ಸಾಲಿನವರೆಗಿನ ವಾರ್ಷಿಕ ವೇತನ ಬಡ್ತಿ ಮತ್ತು ಇತರೆ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಲು ಬಿ.ಇ.ಓ ನಾಗೇಂದ್ರಪ್ಪ.ಎ.ಕೆ ಮತ್ತು ಮಧ್ಯವರ್ತಿ ಮಂಜುನಾಥ ಸೇರಿಕೊಂಡು 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರಂತೆ. 

Bhadravathi BEO Nagendrappa Caught by Shivamogga Lokayukta ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ 1,00,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಿ.ಇ.ಓ ನಾಗೇಂದ್ರಪ್ಪ.
Bhadravathi BEO Nagendrappa Caught by Shivamogga Lokayukta ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ 1,00,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಿ.ಇ.ಓ ನಾಗೇಂದ್ರಪ್ಪ.

ಶಿವಮೊಗ್ಗ ಮಾರಿಕಾಂಬ ಜಾತ್ರೆ, ತಾಳಗುಪ್ಪ ಬೆಂಗಳೂರು ವಿಶೇಷ ಟ್ರೈನ್​

ಇದೇ ಕಾರಣಕ್ಕೆ  ಲಿಂಗರಾಜು  02-03-2026 ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ದೂರಿನ ಅನ್ವಯ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು, 02-03-2026 ರಂದು ಸಂಜೆ 07:00 ಗಂಟೆಗೆ ಭದ್ರಾವತಿಯ ಬಿ.ಇ.ಓ ಕಛೇರಿಯಲ್ಲಿಯೇ ದಾಳಿ ನಡೆಸಿದ್ದಾರೆ.

Bhadravathi BEO Nagendrappa Caught by Shivamogga Lokayukta ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ 1,00,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಿ.ಇ.ಓ ನಾಗೇಂದ್ರಪ್ಪ.
Bhadravathi BEO Nagendrappa Caught by Shivamogga Lokayukta ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ 1,00,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಿ.ಇ.ಓ ನಾಗೇಂದ್ರಪ್ಪ.

ಬಿ.ಇ.ಓ ಕೊಠಡಿಯಲ್ಲಿಯೇ ದೂರುದಾರರಿಂದ 1,00,000 ರೂಪಾಯಿ ಮುಂಗಡ ಲಂಚ ಪಡೆಯುತ್ತಿದ್ದ ಬಿ.ಇ.ಓ ನಾಗೇಂದ್ರಪ್ಪ ಹಾಗೂ ಮಂಜುನಾಥ ಅವರನ್ನು ಟ್ರ್ಯಾಪ್ ಮಾಡಿ, ಲಂಚದ ಹಣವನ್ನು ಜಪ್ತಿ ಮಾಡಲಾಗಿದೆ. 

ಶಿವಮೊಗ್ಗ ಲೋಕಾಯುಕ್ತ

ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್ ಕುಸಲಾಪುರ ಅವರು ಇಬ್ಬರೂ ಆರೋಪಿತರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.ಕರ್ನಾಟಕ ಲೋಕಾಯುಕ್ತದ ಶಿವಮೊಗ್ಗ ಪೊಲೀಸ್ ಅಧೀಕ್ಷಕ ಎಮ್.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಗುರುರಾಜ್.ಎನ್ ಮೈಲಾರ ಹಾಗೂ ಇಲಾಖೆಯ ಸಿಬ್ಬಂದಿಗಳು ಈ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

ಸುದ್ದಿ ಟೈಟಲ್ : Bhadravathi BEO Nagendrappa Caught by Shivamogga Lokayukta ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ 1,00,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಿ.ಇ.ಓ ನಾಗೇಂದ್ರಪ್ಪ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ