bhadra dam ಜೂನ್​ 28 : ಭದ್ರಾ ಡ್ಯಾಂ ನಿಂದ ನದಿಗೆ ನೀರು | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

prathapa thirthahalli
Prathapa thirthahalli - content producer

bhadra dam : ಭದ್ರಾ ಡ್ಯಾಂ ನಿಂದ ನದಿಗೆ ನೀರು | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

bhadra dam : ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ನದಿಗೆ ಬಿಡುವ ಸಾದ್ಯತೆ ಇದ್ದು, ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಹಾಗೂ ಅಧೀಕ್ಷಕರು ತಿಳಿಸಿದ್ದಾರೆ.

ಭದ್ರಾ ಜಲಾಶಯ ಪ್ರದೇಶದಲ್ಲಿ ಮುಂಗಾರು  ಮಳೆ  ಹೆಚ್ಚಾಗಿರುವ ಕಾರಣ ನೀರಿನ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ನೀರಿನ ಒಳಹರಿವು ಪ್ರಮಾಣ  20 ಸಾವಿರದಿಂದ 25 ಸಾವಿರ  ಕ್ಯೂಸೆಕ್ಸ್ ಇದ್ದು, ಆಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಹರಿಬಿಡಬಹುದು. ಇದರಿಂದಾಗಿ ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕು.  ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

- Advertisement -
TAGGED:
Share This Article
1 Comment

Leave a Reply

Your email address will not be published. Required fields are marked *