Bhadra Dam Water Release Schedule : ಶಿವಮೊಗ್ಗ : ಭದ್ರಾ ಜಲಾಶಯದ ಮೇಲೆ ಅವಲಂಭಿತರಾಗಿರುವ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲೊಂದು ಗುಡ್ ನ್ಯೂಸ್ ಸಿಕ್ಕಿದೆ. ಭದ್ರಾ ಡ್ಯಾಂನಿಂದ ನಾಳೆಯಿಂದಲೇ ಬರೋಬ್ಬರಿ 120 ದಿನಗಳ ವರೆಗೂ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಇವತ್ತು ನಡೆದ ಕಾಡಾ ಮೀಟಿಂಗ್ನಲ್ಲಿ ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ತೀರ್ಮಾನಿಸಲಅಗಿದೆ. ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಗಿದೆ.

ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಈ ಬಗ್ಗೆ ಮಾತನಾಡ್ತಾ ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಅಚ್ಚುಕಟ್ಟು ವ್ಯಾಪ್ತಿಯ ನಾಲೆ, ಕೆರೆಗಳಲ್ಲಿ ತುಂಬಿರುವ ಹೂಳನ್ನು ನರೇಗಾ ಯೋಜನೆಯಡಿ ತೆಗೆಯಿಸಬಹುದಾದರೂ ಪಟ್ಟಣ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿನ ನಾಲೆ, ಕೆರೆಗಳಲ್ಲಿನ ಹೂಳನ್ನು ತೆಗೆಯಿಸುವುದು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ನಿರೀಕ್ಷೆಯಂತೆ ಸಕಾಲದಲ್ಲಿ ಜಲಾಶಯದಿಂದ ಹರಿಸುವ ನೀರು ನಿಗಧಿತ ಗುರಿ ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ಪ್ರಾಧಿಕಾರದ ನೀರಾವರಿ ಇಂಜಿನಿಯರ್ ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಪ್ರಸ್ತಾವನೆಯನ್ನು ತಯಾರಿಸಿ ಕೂಡಲೇ ಸಲ್ಲಿಸಬೇಕು. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ|| ಅಂಶುಮಂತ್ ಅವರು ಮಾತನಾಡಿ, ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಸಮೀಪದ ಸಾಗುವಳಿದಾರರಿಗೆ ನೀರು ದೊರೆಯುತ್ತಿರುವಂತೆಯೇ ದೂರದ ರೈತರ ಒಣಭೂಮಿಗೆ ನೀರು ಹರಿಸಬೇಕಾಗಿರುವುದು ಪ್ರಾಧಿಕಾರದ ಹೊಣೆಯಾಗಿದೆ. ನೈಸರ್ಗಿಕವಾಗಿ ದೊರೆಯುತ್ತಿರುವ ಅಮೂಲ್ಯ ಜಲವನ್ನು ಮಿತವಾಗಿ ಬಳಸಿಕೊಳ್ಳಬೇಕು. ಮಾನವೀಯ ನೆಲೆಯಲ್ಲಿ ಎಲ್ಲ ರೈತರ ಹಿತಸುಖ ಕಾಯುವ ನಿಟ್ಟಿನಲ್ಲಿ ಚಿಂತಿಸಬೇಕು. ನೀರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು. ವ್ಯರ್ಥವಾಗಿ ಹರಿದು ಹೋಗುವಂತಾಗಬಾರದು ಎಂದರು.
ನಶೆ ಮುಕ್ತ ಶಿವಮೊಗ್ಗ ಜಿಲ್ಲೆ ಸಂಕಲ್ಪ- ವಾರ್ ಫೂಟ್ ನಲ್ಲಿ ಕೆಲಸ ಮಾಡುತ್ತೇವೆ- ಎಸ್ಪಿ ಬಿ. ನಿಖಿಲ್
ಸಭೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಆರ್.ಪ್ರಸನ್ನಕುಮಾರ್, ಅಭಿಯಂತರರಾದ ರವಿಕುಮಾರ್, ರವಿಚಂದ್ರ ಸೇರಿದಂತೆ ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಭಾಗವಹಿಸಿದ್ದರು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
