STATE NEWS

ಶಿವಮೊಗ್ಗ ಸೇರಿ 8 ಜಿಲ್ಲೆಗಳ ಕೇಳುಗರಿಗೆ ಸಿಹಿಸುದ್ದಿ! ಎಫ್‌ಎಂ 101.4 ಶೀಘ್ರದಲ್ಲಿ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ ಜನರಿಗೆ ಮತ್ತೊಂದು ಗುಡ್ ನ್ಯೂಸ್​ ಸಿಕ್ಕಿದೆ. ಭದ್ರಾವತಿ ಆಕಾಶವಾಣಿಯಲ್ಲಿ ಎಫ್​ಎಂ ಪ್ರಸಾರದ ಕೇಂದ್ರ ಲೋಕಾರ್ಪಣೆಗೆ ಸಿದ್ಧವಾಗಿದೆ.

ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿನ 8 ಜಿಲ್ಲೆಗಳಿಗೆ ತನ್ನ ಪ್ರಸಾರ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವ ಆಕಾಶವಾಣಿಯ 10 ಕಿಲೋವ್ಯಾಟ್ ಸಾಮರ್ಥ್ಯದ ‘ಎಫ್‌ಎಂ 101.4 ಮೆಗಾಹರ್ಟ್ಸ್’ ಪ್ರಸಾರ ಕೇಂದ್ರ  ಉದ್ಘಾಟನೆಗೆ ಸಜ್ಜಾಗಿದೆ. 

ಫೆಬ್ರವರಿ 26, 2026 ರಂದು ಮಧ್ಯಾಹ್ನ 12.30 ಕ್ಕೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರು ಈ ನೂತನ ಎಫ್‌ಎಂ ಕೇಂದ್ರವನ್ನು ವಿಧ್ಯುಕ್ತವಾಗಿ ಲೋಕಾರ್ಪಣೆ ಮಾಡಲಿದ್ದಾರೆ.

Bhadravathi Akashvani FM 101 akashvani Bhadravathi
Bhadravathi Akashvani FM 101

Shivamogga airport ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಮತ್ತೊಂದು ಗುಡ್‌ ನ್ಯೂಸ್‌! ಏನದು ಗೊತ್ತಾ?

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.

ಉದ್ಘಾಟನೆಯ ಬಳಿಕ ನೂತನ ಕೇಂದ್ರದ ಮುಖಾಂತರ ಆಕಾಶವಾಣಿಯ ವಿಶೇಷ ಕಾರ್ಯಕ್ರಮಗಳು ಪ್ರಸಾರವಾಗಲಿದ್ದು, ಸ್ಥಳೀಯ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಜಾನಪದ ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಹೆಚ್ಚಿನ ಅವಕಾಶಗಳು ಲಭ್ಯವಾಗಲಿವೆ. 

ಒಟ್ಟಾರೆ, 1965 ರ ಫೆಬ್ರವರಿ 7 ರಂದು ಆರಂಭವಾಗಿ 62 ನೇ ವಸಂತಕ್ಕೆ ಕಾಲಿಡುತ್ತಿರುವ ಭದ್ರಾವತಿಯ ಆಕಾಶವಾಣಿ ಕೇಂದ್ರ ಇದೀಗ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಮೇಲ್ದರ್ಜೆಗೇರುತ್ತಿದೆ. 

akashvani Bhadravathi
Bhadravathi Akashvani FM 101

ಶಿವಮೊಗ್ಗದಲ್ಲಿ ಡಾಕ್‌ ಅದಾಲತ್‌ | ಯಾವಾಗ

ಮಹಿಳೆಯರು, ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಶ್ರೋತೃಗಳಿಗೆ ಉತ್ತಮ ಮಾಹಿತಿ, ಶಿಕ್ಷಣ ಹಾಗೂ ಮನರಂಜನೆಯನ್ನು ಒದಗಿಸುವುದು ಇದರ ಪ್ರಮುಖ ಉದ್ದೇಶವಾಗಿದೆ 

ಎಸ್.ಆರ್. ಭಟ್ ,  ಆಕಾಶವಾಣಿ ಭದ್ರಾವತಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರು

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

ಭದ್ರಾವತಿ ಆಕಾಶವಾಣಿ ಎಫ್‌ಎಂ 101.4, Bhadravathi Akashvani FM 101.4 ಭದ್ರಾವತಿ ಆಕಾಶವಾಣಿಯ ನೂತನ 10 ಕಿಲೋವ್ಯಾಟ್ ಸಾಮರ್ಥ್ಯದ FM 101.4 MHz ಪ್ರಸಾರ ಕೇಂದ್ರ ಫೆಬ್ರವರಿ 26 ರಂದು ಲೋಕಾರ್ಪಣೆ. ಎಂಟು ಜಿಲ್ಲೆಗಳಿಗೆ ವ್ಯಾಪ್ತಿ ವಿಸ್ತರಣೆ. ಸಚಿವ ಎಲ್. ಮುರುಗನ್ ಅವರಿಂದ ಉದ್ಘಾಟನೆ

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ