ಶಿವಮೊಗ್ಗ ; ಕಾಪರ್​ ವೈರ್​ ಹಾಗೂ ಬ್ಯಾಟರಿ ಕಳ್ಳತನ ಮಾಡಿದ ಆರೋಪಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ?

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೇ ಸುದ್ದಿ: ಶಿವಮೊಗ್ಗ : ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆಯ ಪಕ್ಕದಲ್ಲಿ ಕೆ.ಇ.ಬಿ. ಇಲಾಖೆಯಿಂದ ಅಳವಡಿಸಲಾಗಿದ್ದ 2 ಬ್ಯಾಟರಿ ಹಾಗೂ ಕಾಪರ್ ವೈರ್‌ಗಳನ್ನು ಕಳವು ಮಾಡಿದ್ದ ಆರೋಪಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. 

ಪ್ರಕರಣದ ಹಿನ್ನೆಲೆ 

ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನ ರಸ್ತೆ ಪಕ್ಕದಲ್ಲಿದ್ದ ಕೆ.ಇ.ಬಿ. ಆಸ್ತಿಯನ್ನು ಮಂಜುನಾಥ್ (40 ವರ್ಷ) ಎಂಬಾತನು ಕಳವು ಮಾಡಿಕೊಂಡು ಹೋಗಿದ್ದನು. ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಆಗಿನ ತನಿಖಾಧಿಕಾರಿ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ಯೋಗೇಶ್ ಕೆ.ಎಂ. ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಈ ವ್ಯಾಜ್ಯದ ಕುರಿತು ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. 

ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಪಿ. ಅವರು ಸರ್ಕಾರದ ಪರವಾಗಿ ಪ್ರಬಲವಾದ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಧೀಶರಾದ ಎನ್. ಮುನಿರಾಜ್ ಅವರು ಆರೋಪಿ ಮಂಜುನಾಥ್ ಮೇಲಿನ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ, 25,000 ದಂಡ ವಿಧಿಸಿದ್ದಾರೆ. ಅಲ್ಲದೆ, ದಂಡದ ಮೊತ್ತ ಪಾವತಿಸಲು ತಪ್ಪಿದಲ್ಲಿ 3 ತಿಂಗಳುಗಳ ಕಾಲ ಸಾದಾ ಕಾರಾಗೃಹವಾಸ ಶಿಕ್ಷೆ ಅನುಭವಿಸಬೇಕೆಂದು ಆದೇಶ ಹೊರಡಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor