BHADRAVATI

ಮಹಿಳೆಯ ಮನೆಗೆ ನುಗ್ಗಿ ಹಲ್ಲೆ, ಜೀವ ಬೆದರಿಕೆ, ಇಬ್ಬರು ಆರೋಪಿಗಳಿಗೆ ಕೋರ್ಟ್ ಕೊಟ್ಟ ಶಿಕ್ಷೆಯೇನು ಗೊತ್ತಾ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಭದ್ರಾವತಿ: ಮಹಿಳೆಯೊಬ್ಬರ ಮನೆಗೆ ಅತಿಕ್ರಮವಾಗಿ ನುಗ್ಗಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ ಇಲ್ಲಿನ ನ್ಯಾಯಾಲಯವು ಕಠಿಣ ಕಾರಾವಾಸ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗ, ಸರ್ಕಾರಿ ಅಧಿಕಾರಿಗೆ ಬಂತು ಲೋಕಾಯುಕ್ತ ಹೆಸರಿನಲ್ಲಿ ಫೋನ್​, ಹೀಗೂ ಇರ್ತಾರೆ ಹುಷಾರ್​​

ಘಟನೆಯ ಹಿನ್ನೆಲೆ

ಭದ್ರಾವತಿಯ ಕೆ.ಹೆಚ್. ನಗರದ ನಿವಾಸಿಯಾದ ಮಹಿಳೆಯೊಬ್ಬರ ಮನೆಗೆ ಆರೋಪಿಗಳಾದ ಉಮೇಶ್ (49) ಮತ್ತು ನಂದನ್ (22) ಎಂಬುವವರು ಜಾಗದ ವಿಚಾರವಾಗಿ ಅಕ್ರಮವಾಗಿ ಪ್ರವೇಶಿಸಿದ್ದರು. ಈ ವೇಳೆ ಮಹಿಳೆಗೆ ಜಾತಿ ನಿಂದನೆ ಮಾಡಿ, ಕಾಲಿನಿಂದ ಹಲ್ಲೆ ನಡೆಸಿದ್ದಲ್ಲದೆ ಪ್ರಾಣ ಬೆದರಿಕೆ ಒಡ್ಡಿದ್ದರು. ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. 

ಅಂದಿನ ಭದ್ರಾವತಿ ಎಎಸ್‌ಪಿ ಆಗಿದ್ದ ಜಿತೇಂದ್ರ ಕುಮಾರ್ ದಯಾಮ (ಐಪಿಎಸ್) ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜ ರತ್ನಮ್ಮ ಪಿ. ಅವರು ಪ್ರಬಲವಾಗಿ ವಾದ ಮಂಡಿಸಿ, ಆರೋಪಿಗಳ ಮೇಲಿನ ಅಪರಾಧವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದರು.

ವಾದ-ಪ್ರತಿವಾದಗಳನ್ನು ಆಲಿಸಿದ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು, ಆರೋಪಿಗಳು ದೋಷಿಗಳು ಎಂದು ತೀರ್ಮಾನಿಸಿ ತಲಾ 2 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ವಿಧಿಸಿದ್ದಾರೆ. ಇದರೊಂದಿಗೆ ಒಟ್ಟು 62,000 ರೂಪಾಯಿ ದಂಡ ವಿಧಿಸಲಾಗಿದ್ದು, ನೊಂದ ಮಹಿಳೆಯರಿಗೆ ತಲಾ 25,000 ರೂಪಾಯಿ ಪರಿಹಾರ ನೀಡುವಂತೆ ಆದೇಶ ನೀಡಿದ್ದಾರೆ.

Bhadravathi Court Sentences Two to Prison for Assault

Bhadravathi Court  Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed
Bhadravathi Court

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.