ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ ಬಸ್ಸಿನಲ್ಲಿದ್ದ ಸುಮಾರು 15 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ.
ಖಾಸಗಿ ಬಸ್ ಭದ್ರಾವತಿಯಿಂದ ಚನ್ನಗಿರಿಗೆ ಪ್ರಯಾಣಿಸುತ್ತಿದ್ದ ವೇಳೆ ಕೂಡ್ಲಿಗೆರೆ ಸಮೀಪ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದೆ. ಪರಿಣಾಮ ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ. ತಕ್ಷಣವೇ ಗಾಯಾಳುಗಳನ್ನು ಭದ್ರಾವತಿಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಮಾಹಿತಿ ತಿಳಿಯುತ್ತಿದ್ದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
