ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

Bhadravathi: In a shocking incident, a court in Bhadravathi has imposed a fine of Rs 25,000 on the father of a young boy for riding a bike without a DL. ಡಿಎಲ್​ ಇಲ್ಲದೆ ಅಪ್ತಾಪ್ತ ವಯಸ್ಸಿನ ಬಾಲಕ ಬೈಕ್​ ಚಲಾಯಿಸಿದ್ದಕ್ಕೆ ಆತನ ತಂದೆಗೆ ಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS

ಅಪ್ರಾಪ್ತರ ಕೈಗೆ ವಾಹನ ಚಲಾಯಿಸಲು ಕೊಡುವುದು ತಪ್ಪು ಎಂದರೂ ಗೊತ್ತಿದ್ದರೂ ಕೆಲವರು ಅದೇ ತಪ್ಪನ್ನು ಮಾಡುತ್ತಿರುತ್ತಾರೆ. ಆದರೆ ಗೊತ್ತಿರಲಿ, ಮಕ್ಕಳ ಕೈಗೆ ವಾಹನ ಚಲಾಯಿಸಲು ಕೊಟ್ಟರೇ, ತಂದೆ ತಾಯಿಗಳು ದಂಡಕಟ್ಟಬೇಕಾಗುತ್ತದೆ. ಇದಕ್ಕೆ ಸಾಕ್ಷಿಯಾಗಿ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. 

 

ದಿನಾಂಕಃ-19-07-2023  ರಂದು ಭದ್ರಾವತಿ  ಹುತ್ತಾ ಕಾಲೋನಿಯ ಬಳಿ ಪೊಲೀಸರು ವಾಹನ ತಪಾಸಣೆ ಮಾಡುವಾಗ 16 ವರ್ಷದ ಅಪ್ರಾಪ್ತ ಬೈಕ್​ ಓಡಿಸ್ತಿರುವುದನ್ನ ಕಂಡಿದ್ದಾನೆ. ಆತನನ್ನು ನಿಲ್ಲಿಸಿ ವಿಚಾರಣೆ ನಡೆಸಿದ ಪೊಲೀಸರು, ಈ ಸಂಬಂಧ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿ, ಅಪ್ರಾಪ್ತ ವಯ್ಯಸ್ಸಿನ ಬಾಲಕನಿಗೆ ದ್ವಿ ಚಕ್ರ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಕಾರಣಕ್ಕೆ ವಾಹನ ಮಾಲೀಕರಿಗೆ  ಲಘು ಪ್ರಕರಣ ದಾಖಲಿಸಿದ್ದರು. ಸದ್ಯ ಈ ಪ್ರಕರಣ ಸಂಬಂಧ ಭದ್ರಾವತಿಯ  ಜೆಎಂಎಫ್ಸಿ ನ್ಯಾಯಾಲಯ ಮಾಲೀಕರಿಗೆ   ರೂ 25,000/- ದಂಡ ವಿಧಿಸಿದ್ಧಾರೆ. 


ಶಿವಮೊಗ್ಗ ನಾಗರಿಕರ ಗಮನಕ್ಕೆ! ನಾಳೆ ಈ ಪ್ರದೇಶಗಳಲ್ಲಿ ಪವರ್ ಕಟ್!

ಶಿವಮೊಗ್ಗ ಸಂತೇಕಡೂರು ವಿ.ವಿ. ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ  ಜು.22 ರ ಬೆಳಗ್ಗೆ 10-00 ರಿಂದ ಸಂಜೆ 04-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಇರೋದಿಲ್ಲ ಕರೆಂಟ್

ಈ ವ್ಯಾಪ್ತಿಯಲ್ಲಿ ಬರುವ ಸಂತೇ ಕಡೂರು, ಶ್ರೀರಾಮನಗರ, ರಾಂಪುರ, ಭಂಡಾರಿ ಕ್ಯಾಂಪ್, ಮಳಲಿ ಕೊಪ್ಪ ಹಾಗೂ ಸುತ್ತಮುತ್ತಲಿನ  ಪ್ರದೇಶಗಳಲ್ಲಿ ಜು.22 ರ ಬೆಳಗ್ಗೆ 10-00 ರಿಂದ ಸಂಜೆ 04-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


24 ಗಂಟೆಯಲ್ಲಿ 323.90 MM ಮಳೆ! ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟು ಮಳೆಯಾಗಿದೆ? ವರದಿ ಇಲ್ಲಿದೆ

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 323.90 ಮಿಮಿ ಮಳೆಯಾಗಿದ್ದು, ಸರಾಸರಿ 46.27 ಮಿಮಿ ಮಳೆ ದಾಖಲಾಗಿದೆ.  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  395.44 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 13.30 ಮಿಮಿ., ಭದ್ರಾವತಿ 11.20 ಮಿಮಿ., ತೀರ್ಥಹಳ್ಳಿ 71.80 ಮಿಮಿ., ಸಾಗರ 86.80 ಮಿಮಿ., ಶಿಕಾರಿಪುರ 21.60 ಮಿಮಿ., ಸೊರಬ 39.40 ಮಿಮಿ. ಹಾಗೂ ಹೊಸನಗರ 79.80 ಮಿಮಿ. ಮಳೆಯಾಗಿದೆ. 

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ: 

ಲಿಂಗನಮಕ್ಕಿ: 1819 (ಗರಿಷ್ಠ), 1764.70 (ಇಂದಿನ ಮಟ್ಟ), 43043.00 (ಒಳಹರಿವು), 1157.30 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1797.30.  

ಭದ್ರಾ: 186 (ಗರಿಷ್ಠ), 143.00 (ಇಂದಿನ ಮಟ್ಟ), 7734.00 (ಒಳಹರಿವು), 165.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 183.23.   

ತುಂಗಾ: 588.24 (ಗರಿಷ್ಠ), 588.02 (ಇಂದಿನ ಮಟ್ಟ), 30453.00 (ಒಳಹರಿವು), 31934.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24. 

ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 575.96 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4905 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 583.46 (ಎಂಎಸ್‍ಎಲ್‍ಗಳಲ್ಲಿ). 

ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.64 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2509 (ಒಳಹರಿವು), 3013.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.04 (ಎಂಎಸ್‍ಎಲ್‍ಗಳಲ್ಲಿ).. 

ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.18 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3145.00 (ಒಳಹರಿವು), 474.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 576.35 (ಎಂಎಸ್‍ಎಲ್‍ಗಳಲ್ಲಿ). 

ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 578.00 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2756.00 (ಒಳಹರಿವು), 510.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 580.46 (ಎಂಎಸ್‍ಎಲ್‍ಗಳಲ್ಲಿ).  

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​