ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 28, 2025: ನಾಳೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ಭಾಗದಲ್ಲಿ ಕರೆಂಟ್ ಇರಲ್ಲ ಅಂತಾ ಮೆಸ್ಕಾಂ ಹೇಳಿದೆ. ಅಕ್ಟೋಬರ್ 29 ರಂದು ಮಾಚೇನಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ಇಡೀ ದಿನ ವಿದ್ಯುತ್ ಕಡಿತವಾಗಲಿದೆಯಂತೆ. ವಿದ್ಯುತ್ ಮಾರ್ಗಗಳ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಂಡಿರುವ ಕಾರಣ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ. ಒಟ್ಟಾರೆ ಬೆಳಿಗ್ಗೆ 09:30 ಗಂಟೆಯಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂದು ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರೆಂಟ್ ಕಂಬಕ್ಕೆ ಗುದ್ದಿದ ಕಾರು! ಘಾಟಿ ಟರ್ನಿಂಗ್ನಲ್ಲಿ ಸಿಲುಕಿದ ಲಾರಿ, ಬಸ್!
ಎಲ್ಲೆಲ್ಲಿ ಕರೆಂಟ್ ಇರಲ್ಲ
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಡೈರಿ ವೃತ್ತ, ಶಿವರಾಮನಗರ, ವಿಶ್ವೇಶ್ವರಯ್ಯ ನಗರ, ಜೇಡಿಕಟ್ಟೆ, ಜೇಡಿಕಟ್ಟೆ ಹೊಸೂರು, ಸಿರಿಯೂರು, ವೀರಾಪುರ, ಕಲ್ಲಹಳ್ಳಿ, ಸಂಕ್ಷೇಪುರ, ಹಾಗಲಮನೆ, ಹುಲಿರಾಮನಕೊಪ್ಪ, ಸಿರಿಯೂರು ತಾಂಡ, ಮತ್ತು ಸಿರಿಯೂರು ಕ್ಯಾಂಪ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ವಿದ್ಯುತ್ ಅಡಚಣೆ ಉಂಟಾಗಲಿದೆ. ಗ್ರಾಹಕರು ಈ ಸಮಯದಲ್ಲಿ ಸಹಕರಿಸಬೇಕು ಎಂದು ವಿದ್ಯುತ್ ಸರಬರಾಜು ಇಲಾಖೆಯ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
