ಭದ್ರಾವತಿ: ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡಿದ ನಿರಂತರ ಕಿರುಕುಳ ತಾಳಲಾರದೆ, ದ್ವಿತೀಯ ಪಿಯುಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿಯ ಗ್ರಾಮವೊಂದರಲ್ಲಿ ನಡೆದಿದೆ.
ಶಿವಮೊಗ್ಗ: ಮನೆಗೆ ಕ್ಯೂರಿಂಗ್ ಮಾಡುವಾಗ ಆಕಸ್ಮಿಕವಾಗಿ ಬಿದ್ದು ಗಾರೆ ಮೇಸ್ತ್ರಿ ಸಾವು
ಎಫ್ ಐ ಆರ್ನಲ್ಲಿ ಇರುವಂತೆ ಭದ್ರಾವತಿಯ ಯುವಕನೊಬ್ಬ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಹಿಂದೆ ಬಾಲಕಿಯ ತಾಯಿ ಯುವಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ, ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಳ್ಳದ ಕಾರಣ ಆತ ಕಿರುಕುಳ ಮುಂದುವರಿಸಿದ್ದ ಎನ್ನಲಾಗಿದೆ.
ಯುಗಾದಿ ಹಬ್ಬದ ದಿನ ಸಂಜೆ ಬಾಲಕಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ತಾಯಿ ಪ್ರಶ್ನಿಸಿದ್ದಾರೆ. ಆಗ ಬಾಲಕಿ, ಯುವಕ ಕರೆ ಮಾಡಿ ನನ್ನನ್ನು ಪ್ರೀತಿಸುವಂತೆ, ತನ್ನ ಜೊತೆ ಬರುವಂತೆ ಒತ್ತಾಯಿಸುತ್ತಿದ್ದಾನೆ. ಇಲ್ಲದಿದ್ದರೆ ಬದುಕಲು ಲಾಯಕ್ಕಿಲ್ಲ ಎನ್ನುತ್ತಿದ್ದಾನೆ. ನನಗೆ ತುಂಬಾ ಕಿರಿಕಿರಿಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾಳೆ. ತಾಯಿ ತನ್ನ ಹೋಟೆಲ್ ಕೆಲಸಕ್ಕೆ ಹೋದ ಕೆಲವೇ ಸಮಯದ ನಂತರ, ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ.
ಬಾಲಕಿಯ ಆತ್ಮಹತ್ಯೆಗೆ ಯುವಕನ ಕಿರುಕುಳವೇ ಕಾರಣ ಎಂದು ಆರೋಪಿಸಿ ಆಕೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Bhadravathi Minor Girl Suicide Over Harassment


