Bhadravathi MLA retires : ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಬಿ.ಕೆ. ಸಂಗಮೇಶ್ ಅವರು ಮುಂದಿನ ಚುನಾವಣೆಯಿಂದ ಸ್ಪರ್ಧಿಸುವುದಿಲ್ಲ ಎಂದು ಅಧಿಕೃತವಾಗಿ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಇದರೊಂದಿಗೆ ತಮ್ಮ ಪುತ್ರ ಗಣೇಶ್ ಅವರಿಗೆ ಆಶೀರ್ವಾದ ಮಾಡುವ ಮೂಲಕ ಕ್ಷೇತ್ರದ ಜನತೆ ಬೆಂಬಲ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆದ ಪಂಚ ಗ್ಯಾರಂಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇದೇ ನನ್ನ ಕೊನೆಯ ಚುನಾವಣೆ. ಇಷ್ಟು ವರ್ಷ ನೀವು ನಿಮ್ಮ ಸಹೋದರ ಎಂದು ತಿಳಿದು ನನಗೆ ಆಶೀರ್ವಾದ ಮಾಡಿದಂತೆ, ಮುಂದಿನ ಚುನಾವಣೆಯಲ್ಲಿ ನನ್ನ ಮಗ ಗಣೇಶ್ ಅವರಿಗೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಇರಲಿ ಎಂದರು. ಶಾಸಕ ಸಂಗಮೇಶ್ ಅವರ ಪುತ್ರ ಗಣೇಶ್ ಅವರು ಪ್ರಸ್ತುತ ಭದ್ರಾವತಿ ಪಂಚ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
- Advertisement -

