Bhadravathi Old Town police station : ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್ ಬೆಳಗ್ಗೆ ಮಾಯ! ಮಾಲೀಕನಿಗೆ ಶಾಕ್​

ಹಂಚಿಕೊಳ್ಳಿ
WhatsApp Facebook X Telegram
Bhadravathi Old Town police station  : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಲಾಗಿದೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಇಲ್ಲಿನ  ಖಲಂದರ್ ನಗರದ ಅಬ್ದುಲ್ ರೆಹಮಾನ್ ಎಂಬುವರು ರಾತ್ರಿ ಮನೆಯ ಕಾಂಪೌಂಡ್‌ನಲ್ಲಿ ರಾಯಲ್ ಎನ್ ಫೀಲ್ಡ್ ಬೈಕನ್ನು ನಿಲ್ಲಿಸಿದ್ದರು. ಬೆಳಗ್ಗೆ ಎದ್ದು ನೋಡುವಾಗ  ಬೈಕ್ ಕಳುವಾಗಿರುವುದು ಗೊತ್ತಾಗಿದೆ. ಅಕ್ಕಪಕ್ಕ ವಿಚಾರಿಸಿದ ಅವರು, ಕೊನೆಗೆ ಅಂತಿಮವಾಗಿ ಓಲ್ಡ್​ ಟೌನ್​ ಪೊಲೀಸರಿಗೆ  ದೂರು ದಾಖಲಿಸಿ ಕೇಸ್ ಮಾಡಿಸಿದ್ದಾರೆ

ಆಕ್ಸಿಡೆಂಟ್​ನಲ್ಲಿ ವೃದ್ಧೇ ಸಾವು 

ಭದ್ರಾವತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದಾಗ ವೃದ್ಧೆಯೊಬ್ಬರು ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದರಿಂದ ಸಾವನ್ನಪ್ಪಿದ್ದಾರೆ.  ತಾಲೂಕಿನ ಭದ್ರಾವತಿ-ಚನ್ನಗಿರಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಅರಳಿಹಳ್ಳಿ ಗ್ರಾಮದ ನಿವಾಸಿ ಮಹಮ್ಮದ್ ಸಾಧಿಕ್‌ರವರ ಮುತ್ತಜ್ಜಿ ಸುಮಾರು 92 ವರ್ಷ ವಯೋಮಾನದ ಚಮನ್ ಬೀ ಸ್ಥಳದಲ್ಲಿಯೇ ಮೃತಪಟ್ಟಿದ್ಧಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟ್ರ್ಯಾಕ್ಟರ್ ಚಾಲಕ ನಾಗರಾಜ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor