Bhadravathi Police ಭದ್ರಾವತಿ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ನಾಲ್ಕು ದಶಕಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣವೊಂದರ ಆರೋಪಿಯನ್ನು ಭದ್ರಾವತಿಯ ಪೇಪರ್ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಶಿವಮೊಗ್ಗ : ಆಟೋ LPG ಹಾಗೂ CNG ಬಂಕ್ಗಳಿಗೆ ಮಹತ್ವದ ಎಚ್ಚರಿಕೆ ನೀಡಿದ ಡಿ.ಸಿ ಪ್ರಭುಲಿಂಗ ಕವಳಿಕಟ್ಟಿ,ಏನದು
ಬೆಂಗಳೂರಿನ ಪೀಣ್ಯ ನಿವಾಸಿ ಮುಡ್ಲಾಗಿರಿ (65) ಬಂಧಿತ ಆರೋಪಿ. ಈತನ ವಿರುದ್ಧ 1991ರಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಅಕ್ರಮ ಪ್ರವೇಶ, ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು,
ಭದ್ರಾವತಿಯ PCJ & JMFC ನ್ಯಾಯಾಲಯವು ಈತನ ವಿರುದ್ಧ ದಸ್ತಗಿರಿ ವಾರೆಂಟ್ (NBW) ಹೊರಡಿಸಿತ್ತು. ಪೇಪರ್ ಟೌನ್ ಠಾಣೆಯ ಪಿಎಸ್‌ಐ ಕುಮಾರ್ ನೇತೃತ್ವದ ತಂಡದಲ್ಲಿ ಎಎಸ್ಐ ಕುಮಾರ್, ಹೆಚ್‌ಸಿ ಯಲ್ಲಪ್ಪ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಎಎನ್‌ಸಿ ವಿಭಾಗದ ಇಂದ್ರೇಶ್ ಮತ್ತು ಗುರುರಾಜ್ ಅವರು ಬೆಂಗಳೂರಿನಲ್ಲಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
Bhadravathi Police Catch 40-Year Absconding Accused


