KARNATAKA NEWS/ ONLINE / Malenadu today/ Jun 19, 2023 SHIVAMOGGA NEWS
ಭದ್ರಾವತಿ ಪೊಲೀಸರು ದಿಢೀರ್ ಕಾರ್ಯಾಚರಣೆ ಕೈಗೊಂಡು 1 ಕೆ.ಜಿ 490 ಗ್ರಾಂ. ಒಣ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಆಧಾರದ ಮೇರೆಗೆ ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದ ವೀರಶೈವ ರುದ್ರಭೂಮಿ ಬಳಿ ದಾಳಿ ನಡೆಸಿ ನಸ್ರುಲ್ಲಾ ಅಲಿಯಾಸ್ ನಸ್ರು(19) ಮತ್ತು ಸೈಫ್ ಆಲಿ ಖಾನ್(25) ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಸರ್ಕಾರ ಅಸ್ತಿತ್ವಕ್ಕೆ ಬಂದು ತಿಂಗಳಾಗುವಷ್ಟರಲ್ಲಿಯೇ ಪ್ರತಿಭಟನೆಯ ಬಿಸಿ! ವಿದ್ಯುತ್ ದರ ಕಡಿಮೆ ಮಾಡದಿದ್ದರೇ ಹೋರಾಟ ಶುರು
ಬಂಧಿತರಿಂದ ಒಟ್ಟು ಸುಮಾರು 34,400 ರು. ಮೌಲ್ಯದ 1 ಕೆ.ಜಿ 490 ಗ್ರಾಂ ಒಣ ಗಾಂಜಾ ಹಾಗು700 ರು. ನಗದು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಠಾಣಾಧಿಕಾರಿ ಶರಣಪ್ಪ ನೇತೃತ್ವದ ತಂಡವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಹಾಗು ಪೊಲೀಸ್ ಉಪಾಧೀಕ್ಷಕರು ಅಭಿನಂದಿಸಿದ್ದಾರೆ.