ಶಿವಮೊಗ್ಗ: ಭದ್ರಾವತಿಯ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ನಾಮಫಲಕ ಧ್ವಂಸ: ದೂರು ದಾಖಲು

ಹಂಚಿಕೊಳ್ಳಿ
WhatsApp Facebook X Telegram
ಭದ್ರಾವತಿಯ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು
ಭದ್ರಾವತಿಯ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು

ಮಲೆನಾಡುಟುಡೆ ಸುದ್ದಿ / ಭದ್ರಾವತಿ : ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ ಹಾಗೂ ಮುಜರಾಯಿ ಇಲಾಖೆಗೆ ಸೇರಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪ್ರವೇಶದ್ವಾರದ ಬಳಿಯಿದ್ದ ಕಾಂಕ್ರೀಟ್ ನಾಮಫಲಕವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವೆಸಗಿದ ತಪ್ಪಿತಸ್ಥರನ್ನು ತಕ್ಷಣವೇ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರಸಭೆಯ ಮಾಜಿ ಸದಸ್ಯ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಎಂ.ಈ. ಜಗದೀಶ್ ಅವರು ಪೋಲಿಸರಿಗೆ ದೂರು ನೀಡಿದ್ದಾರೆ. 

ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಹೊಂದಿರುವ ಈ ಅಪರೂಪದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಸಂರಕ್ಷಣೆ ಮತ್ತು ನಿರ್ವಹಣೆಗೆ ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆ ಮುಂದಾಗಿದೆ. ಇಂತಹ ಪವಿತ್ರ ಸ್ಥಳದ ಮುಂಭಾಗದಲ್ಲಿದ್ದ ನಾಮಫಲಕವನ್ನು ಕಿಡಿಗೇಡಿಗಳು ಹಾಳುಗೆಡವಿರುವುದು ದೇವಸ್ಥಾನಕ್ಕೆ ಪ್ರತಿದಿನ ಆಗಮಿಸುವ ನೂರಾರು ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದೆ ಎಂದಿದ್ದಾರೆ.

ಈ ಘಟನೆಯ ಕುರಿತು ಈಗಾಗಲೇ ದೇವಾಲಯದ ಆಡಳಿತ ವ್ಯವಸ್ಥಾಪಕ ಮಂಡಳಿ ಹಾಗೂ ಅರ್ಚಕರ ಕುಟುಂಬದ ಗಮನಕ್ಕೆ ತರಲಾಗಿದೆ. ಸಾರ್ವಜನಿಕರ ಹಾಗೂ ಕ್ಷೇತ್ರದ ನಾಗರಿಕರ ಹಿತದೃಷ್ಟಿಯಿಂದ ಪೊಲೀಸರು ತಕ್ಷಣವೇ ತನಿಖೆ ನಡೆಸಿ, ಕೃತ್ಯವೆಸಗಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಜಗದೀಶ್ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor