ಭದ್ರಾವತಿ, ಮಲೆನಾಡುಟುಡೆ ಸುದ್ದಿ: ಭದ್ರಾವತಿಯ ತಡಸ ಗ್ರಾಮದ ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ವಿವರ ನೋಡುವುದಾದರೆ, ಆಗಸ್ಟ್ 17ರಂದು ತಡಸ ಗ್ರಾಮದ ಮನೆಯೊಂದರಲ್ಲಿ ಯಾರೋ ಕಳ್ಳರು ಅಡುಗೆ ಮನೆಯ ವೆಂಟಿಲೇಟರ್ ಮೂಲಕ ಮನೆಗೆ ನುಗ್ಗಿದ್ದಾರೆ. ನಂತರ ಮನೆಯಲ್ಲಿದ್ದ ಒಟ್ಟು 6,39,000 ರೂಪಾಯಿ ಮೌಲ್ಯದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಕಲಂಗಳು ಅಡಿಯಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತಂಡವನ್ನು ರಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಗಸ್ಟ್ 19ರಂದು 2 ಜನ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆದು, ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ 6,89,965 ರೂಪಾಯಿ ಬಾಳುವ ಬಂಗಾರ ಹಾಗೂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
