ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ (Bhadravathi Train incident)ರೈಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಕಳೆದ ನವೆಂಬರ್ 28 ರಂದು ನಡೆದ ಘಟನೆ ಸಂಬಂಧ, ವ್ಯಕ್ತಿಯ ಗುರುತು ಪತ್ತೆಗಾಗಿ ಪ್ರಕಟಣೆ ನೀಡಲಾಗಿದೆ. ಭದ್ರಾವತಿ ರೈಲು ನಿಲ್ದಾಣದ ಸಮೀಪ ನ. 28ರಂದು ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಸುಮಾರು 40 ವರ್ಷದ ವ್ಯಕ್ತಿ ಡಿ.10ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ, ತಲೆಯಲ್ಲಿ ಉದ್ದನೆಯ ಕಪ್ಪು ಮತ್ತು ಬಿಳಿ ಕೂದಲು, ಕುರುಚಲು ಗಡ್ಡ, ಮೀಸೆ ಬಿಟ್ಟಿದ್ದಾನೆ. ಮೃತನ ವಾರಸುದಾರರು ಇದ್ದಲ್ಲಿ 08182-222974, 948080 2124 2 ಸಂಪರ್ಕಿಸಬಹುದು ಎಂದು ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

ಮಲೆನಾಡಲ್ಲಿ ಅಡಿಕೆ ದರ ಏರಿಳಿತ: ಶಿವಮೊಗ್ಗ, ಸಾಗರ ಸೇರಿದಂತೆ ಹಲವು APMC ಅಡಕೆ ರೇಟ್‌ಗಳು ಇಲ್ಲಿವೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ಶಿವಮೊಗ್ಗ, ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, 51.75 ಲೀಟರ್ ಗೋವಾ ಮದ್ಯ ವಶ
