SHIVAMOGGA NEWS TODAY

ಭದ್ರಾವತಿ: ಈ ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ!,1.60 ಲಕ್ಷ ದಂಡ, ಇವ್ರು ಮಾಡಿದ್ದೇನು ಗೊತ್ತಾ 

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಭದ್ರಾವತಿ: ಅಮಾಯಕ ಮಹಿಳೆಯರನ್ನು ಹೆದರಿಸಿ, ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಭದ್ರಾವತಿಯ ಮೂವರು ಮಹಿಳೆಯರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ   10 ವರ್ಷಗಳ ಕಠಿಣ ಕಾರಾವಾಸ ಹಾಗೂ ತಲಾ 1,61,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.  ಚಂದ್ರಕಲಾ (31),ಶಿಲ್ಪಾ ಎಸ್ (35), ಹಾಗೂ  ಕವಿತಾ (40), ಶಿಕ್ಷೆಗೊಳಗಾದ ಆರೋಪಿಗಳು.

ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​

ಪ್ರಕರಣದ ಹಿನ್ನೆಲೆ

2021ರ ಡಿಸೆಂಬರ್‌ನಲ್ಲಿ ಭದ್ರಾವತಿಯ ಉಜ್ಜನಿಪುರದ ಮಾರಿಯಮ್ಮ ದೇವಸ್ಥಾನದ ಬಳಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆರೋಪಿಗಳಾದ ಚಂದ್ರಕಲಾ, ಶಿಲ್ಪಾ ಮತ್ತು ಕವಿತಾ ಎಂಬುವವರು ಹಣದ ಆಮಿಷವೊಡ್ಡಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿರುವುದು ಪತ್ತೆಯಾಗಿತ್ತು. ನಂತರ ಮಹಿಳೆಯರ ಮೇಲೆ ಪೇಪರ್​ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ನಂತರ  ಸಂತ್ರಸ್ತೆಯರಿಗೆ ಬೆದರಿಕೆ ಹಾಕಿ, ಮನೆಯೊಳಗೆ ಕೂಡಿಹಾಕಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲಾಗುತ್ತಿತ್ತು ಎಂಬುದು ಸಾಬೀತಾಗಿತ್ತು. 

ನಂತರ ಆಗಿನ ಪೇಪರ್ ಟೌನ್ ಇನ್ಸ್‌ಪೆಕ್ಟರ್ ಮಂಜುನಾಥ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು. ಸಾಕ್ಷ್ಯಧಾರಗಳನ್ನು ಪರಿಶೀಲಿಸಿದ ನ್ಯಾಯಾಧೀಶರಾದಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಫೆಬ್ರವರಿ 7ರಂದು ಈ ಕಠಿಣ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.

Bhadravathi 10 Years Jail for 3 Women in Prostitution Case

Bhadravathi 10 Years Jail for 3 Women in Prostitution Case
Bhadravathi 10 Years Jail for 3 Women in Prostitution Case
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.